ಮಧುಗಿರಿ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಲ ನೀಡುತ್ತವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಕ್ರೀಡೆಗಳು ಪರಸ್ಪರರಲ್ಲಿ ಸ್ನೇಹ, ಸೌಹಾರ್ದತೆ ಪ್ರೀತಿ, ವಿಸ್ವಾಸ ಸೋದರತ್ವದ ಮನೋ ಭಾವನೆಯನ್ನು ಮೂಡಿಸುತ್ತವೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸುವ ಭಾವನೆ ಬೆಳಸುತ್ತವೆ ಎಂದರು.
ಕ್ರೀಡೆಗಳಲ್ಲಿ ಉಲ್ಲಾಸ, ಉತ್ಸಾಹ ಇರುತ್ತದೆ. ಕ್ರೀಡೆಗಳು ವಿದ್ಯಾರ್ಥಿ ಜೀವನದ ಒಂದು ಅವಿಭಾಜ್ಯ ಅಂಗ. ಆದ್ದರಿಂದ ಕ್ರೀಡಾಳುಗಳು ಸೋಲು -ಗೆಲುವನ್ನು ಸಮಾನಗಿ ಸ್ವೀಕರಿಸಬೇಕು. ಸೋಲೇ ಗೆಲುವಿನ ಮೆಟ್ಟಿಲು, ಆದ್ದರರಿಂದ ಕ್ರೀಡಾ ಪಟುಗಳು ಹೃದಯ ವೈಶಾಲ್ಯತೆ ಬೆಳಸಿಕೊಂಡು ಆಟಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.ಕ್ರೀಡಾ ಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಅಂಕಗಳ ಮೀಸಲಾತಿ ದೊರಕುತ್ತದೆ. ಆದ್ದರಿಂದ ಗುಣ ಮಟ್ಟದ ಶಿಕ್ಷಣ ಕಲಿಯುವ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪು.ಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎನ್.ಮಹಾಲಿಂಗೇಶ್, ಹೊಸಕೆರೆ ಕಾಲೇಜು ಪ್ರಾಂಶುಪಾಲ ರಂಗಪ್ಪ, ದಬ್ಬೇಘಟ್ಟ ಪ್ರಾಂಶುಪಾಲ ಕೃಷ್ಣಮೂರ್ತಿ ಮತ್ತಿತರರಿದ್ದರು.