ಒತ್ತಡ, ಆತಂಕ ಕಡಿಮೆ ಮಾಡಲು ಕ್ರೀಡೆ ಸಹಕಾರಿ

KannadaprabhaNewsNetwork |  
Published : Sep 05, 2024, 12:38 AM IST
ಪೋಟೊ-೪ ಎಸ್.ಎಚ್.ಟಿ. ೧ಕೆ- ತಾಲೂಕಿನ ಕೊಂಚಿಗೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬೆಳ್ಳಟ್ಟಿ ಗ್ರುಫ್ ಮಟ್ಟದ ಕ್ರೀಡಾಕೂಟವನ್ನು ಬೆಳ್ಳಟ್ಟಿ ಗ್ರಾಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ತಿಮ್ಮರಡ್ಡಿ ಮರಡ್ಡಿ ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದರು. | Kannada Prabha

ಸಾರಾಂಶ

ದಾರ್ಶನಿಕರ ಅನುಭವ ವಾಣಿಯಂತೆ ಮನುಷ್ಯನ ದೇಹ ಮತ್ತು ಮನಸ್ಸುಗಳು ದೃಢತೆ ಕಾಯ್ದುಕೊಳ್ಳಲು ಕ್ರೀಡಾ ಚಟುವಟಿಕೆ ರೂಢಿಸಿಕೊಳ್ಳುವುದು ಉತ್ತಮ

ಶಿರಹಟ್ಟಿ: ಕ್ರೀಡೆಗಳು ಪ್ರತಿಯೊಬ್ಬರ ಜೀವನದಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಒತ್ತಡ ಮತ್ತು ಆತಂಕ ಕಡಿಮೆ ಮಾಡಲು ಹಾಗೂ ಸಕಾರಾತ್ಮಕ ಮನೋಭಾವ ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದು ಬೆಳ್ಳಟ್ಟಿ ಗ್ರಾಪಂ ಸದಸ್ಯ ತಿಮ್ಮರಡ್ಡಿ ಮರಡ್ಡಿ ಹೇಳಿದರು.

ತಾಲೂಕಿನ ಕೊಂಚಿಗೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬೆಳ್ಳಟ್ಟಿ ಗ್ರುಪ್‌ ಮಟ್ಟದ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದರು. ಕ್ರೀಡೆಗಳು ಕಾರ್ಯತಂತ್ರದ ಯೋಜನೆ, ನಿರ್ಧಾರ ಮಾಡುವಿಕೆ ಮತ್ತು ತ್ವರಿತ ಪರಿವರ್ತನಗಳಂತಹ ಅರಿವಿನ ಅಭ್ಯಾಸ ಒಳಗೊಂಡಿರುವುದರಿಂದ ಮಾನಸಿಕ ನೆಮ್ಮದಿಗೆ ಕಾರಣವಾಗುತ್ತದೆ ಎಂದರು.

ಸಾಕಷ್ಟು ಜನರು ಕ್ರೀಡೆಯ ಮೂಲಕ ಜಗತ್ತಿನಲ್ಲಿ ಪ್ರಸಿದ್ಧರಾಗಿದ್ದಾರೆ. ಪಾಠದ ಜತೆಗೆ ಕ್ರೀಡೆಯೂ ಮನುಷ್ಯನಿಗೆ ಅವಶ್ಯವಾಗಿದೆ. ಸದೃಢ ದೇಹ ಮತ್ತು ಸದೃಢ ಮನಸ್ಸು ಇರಬೇಕಾದರೆ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ದೈಹಿಕ ಶ್ರಮದಿಂದ ಉತ್ತಮ ಆರೋಗ್ಯದ ಜತೆಗೆ ಶಾಲೆಯಲ್ಲಿ ಹೇಳಿದ ಪಾಠ ಮಸ್ತಕಕ್ಕೆ ಸೇರಲಿದೆ ಎಂದು ಕರೆ ನೀಡಿದರು.

ಮುಖಂಡ ಮಹೇಶ ಬಡ್ನಿ ಮಾತನಾಡಿ, ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರಲು ಸಾಧ್ಯ ಎಂಬ ದಾರ್ಶನಿಕರ ಅನುಭವ ವಾಣಿಯಂತೆ ಮನುಷ್ಯನ ದೇಹ ಮತ್ತು ಮನಸ್ಸುಗಳು ದೃಢತೆ ಕಾಯ್ದುಕೊಳ್ಳಲು ಕ್ರೀಡಾ ಚಟುವಟಿಕೆ ರೂಢಿಸಿಕೊಳ್ಳುವುದು ಉತ್ತಮ. ಇದರಿಂದ ಪ್ರತಿಯೊಬ್ಬರೂ ಒಳ್ಳೆಯ ಆರೋಗ್ಯ ಹೊಂದಬಹುದು ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಮಕ್ಕಳಲ್ಲಿ ಲವಲವಿಕೆ ಮೂಡಲಿದೆ. ಇಂದಿನ ಯುವಕರು ದುಶ್ಚಟಕ್ಕೆ ಹೆಚ್ಚು ಒತ್ತು ಕೊಟ್ಟು ತಮ್ಮ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸಾಧಿಸಬಹುದು ಎಂದು ಹೇಳಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ ದಲಾಲಿ, ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಮಾದರ, ಮಲ್ಲಿಕಾರ್ಜುನ ಗುಳ್ಳಣ್ಣವರ, ಶಂಕ್ರಪ್ಪ ದಲಾಲಿ, ಬಿ.ಎಸ್.ಭಜಂತ್ರಿ, ಬಿ.ಎಂ. ಯರಕದ, ಡಾ. ಭಾರತಿ ರಣತೂರ, ಸಿ.ಬಿ. ಬೂದಿಹಾಳ, ಬಿ.ಸುರೇಶ, ಆರ್.ಎಂ. ಯಣಿಗಾರ ಸೇರಿ ಅನೇಕರು ಇದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌