ಬಾಂಧವ್ಯ ಬೆಸೆಯಲು ಕ್ರೀಡೆ ಪೂರಕ: ಜಿಲ್ಲಾಧಿಕಾರಿ

KannadaprabhaNewsNetwork |  
Published : Oct 04, 2024, 01:25 AM IST
ಕ್ರೀಡಾಕೂಟಕ್ಕೆ ಚಾಲನೆ ನೀಡುತ್ತಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. | Kannada Prabha

ಸಾರಾಂಶ

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್‌ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ. ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್‌ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಟ್ರೋಫಿ ಅನಾವರಣಗೊಳಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ದ.ಕ. ಜಿಲ್ಲಾ ಪೊಲಿಸ್, ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೊರೇಶನ್ ನೇತೃತ್ವದಲ್ಲಿ ಬುಧವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಬ್ರ್ಯಾಂಡ್‌ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್‌ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ. ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್‌ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಟ್ರೋಫಿ ಅನಾವರಣಗೊಳಿಸಿದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಸಹಾಯಕ ಕಮಿಷನರ್ ಹರ್ಷವರ್ಧನ್, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಟ್ರಸ್ಟಿ ದೇವದಾಸ್ ಹೆಗ್ಡೆ, ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಂಶುಪಾಲ ಸುಧೀರ್, ಡೀನ್ ರಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ, ಸಹಾಯಕ ಪ್ರಾಧ್ಯಾಪಕರಾದ ವರುಣ್, ಪದ್ಮನಾಭ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕ್ರಮ ನಿರ್ದೇಶಕ ವಿಲ್ಫ್ರೆಡ್ ಡಿಸೋಜ, ರಾಜೇಶ್ ಪೂಜಾರಿ ಇದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?