ಕ್ರೀಡೆಯಿಂದ ಆರೋಗ್ಯ ವೃದ್ಧಿ, ಮಾನಸಿಕ ನೆಮ್ಮದಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ

KannadaprabhaNewsNetwork |  
Published : Jun 17, 2024, 01:32 AM IST
 ನಗರದ ಸರಕರಿ ಕಲಾ ಕಾಲೇಜು ಮೈದಾನದಲ್ಲಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಉದ್ಘಾಟಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ ಮಾತನಾಡಿದರು | Kannada Prabha

ಸಾರಾಂಶ

ಯಾವಾಗಲು ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಇಂತಹ ಕ್ರೀಡಾಕೂಟದಿಂದ ಆರೋಗ್ಯವನ್ನು ಸಮತೋಲನದಲ್ಲಿ ಇಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು. ಹಾಸನದಲ್ಲಿ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಾರ್ಷಿಕ ಕ್ರೀಡಾಕೂಟ । ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜನೆ

ಕನ್ನಡಪ್ರಭ ವಾರ್ತೆ ಹಾಸನ

ಯಾವಾಗಲು ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಇಂತಹ ಕ್ರೀಡಾಕೂಟದಿಂದ ಆರೋಗ್ಯವನ್ನು ಸಮತೋಲನದಲ್ಲಿ ಇಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು.

ಯಾವಾಗಲು ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಇಂತಹ ಕ್ರೀಡಾಕೂಟದಿಂದ ಆರೋಗ್ಯವನ್ನು ಸಮತೋಲನದಲ್ಲಿ ಇಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು. ಹಾಸನದಲ್ಲಿ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ನಗರದ ಸರ್ಕಾರಿ ಕಲಾ ಕಾಲೇಜು ಮೈದಾನದಲ್ಲಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಉದ್ಘಾಟಿಸಿ ಮಾತನಾಡಿ, ‘ಇಲ್ಲಿನ ಪತ್ರಕರ್ತರಲ್ಲಿ ಒಗ್ಗಟ್ಟಿದ್ದು, ಇಷ್ಟೊಂದು ಜನ ಪತ್ರಕರ್ತರು ಕ್ರೀಡಾಕೂಟಕ್ಕೆ ಆಗಮಿಸಿರುವುದು ನಾನು ಯಾವ ಜಿಲ್ಲೆಯಲ್ಲೂ ನೋಡಿಲ್ಲ. ಇದೇ ರೀತಿ ಕ್ರೀಡಾಕೂಟ ಆಗಾಗ್ಗೆ ಹಮ್ಮಿಕೊಳ್ಳುವ ಮೂಲಕ ಆರೋಗ್ಯವನ್ನು ಸಮತೋಲನದಲ್ಲಿ ಕಾಪಾಡಿಕೊಳ್ಳಬಹುದು’ ಎಂದು ಅಭಿಪ್ರಾಯಪಟ್ಟರು.

‘ಒಂದು ಕಾರ್ಯಕ್ರಮ ನಡೆಸುವುದು ಸುಲಭದ ಕೆಲಸವಲ್ಲ ಯಾವಾಗಲೂ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ವರ್ಷಕ್ಕೊಮ್ಮೆಯಾದರೂ ಒಟ್ಟಾಗಿ ಸೇರಿರುವುದು ನಮಗೆ ಸಂತೋಷ ತಂದಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಮಾತನಾಡಿ, ‘ಪತ್ರಿಕೆ, ದೃಶ್ಯಮಾಧ್ಯಮ ಸಮಾಜದಲ್ಲಿ ಕಂಡು ಬರುವ ತಪ್ಪುಗಳನ್ನು ಬರವಣಿಗೆ ಮೂಲಕ ತಿದ್ದಿ ನಮ್ಮ ಸರ್ಕಾರ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಇದರಿಂದಲೇ ನಾವು ಕೂಡ ನಮ್ಮ ತಾಲೂಕು ಅಧಿಕಾರಿಗಳನ್ನು ಗಣನೆಗೆ ತೆಗೆದುಕೊಂಡು ಕೆಲಸ ಮಾಡಿಸಲಾಗುತ್ತಿದೆ’ ಎಂದು ಹೇಳಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಅಂದು ಶ್ರವಣಬೆಳಗೊಳದಲ್ಲಿ ಇದ್ದಂತಹ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕೊಟ್ಟಂತಹ ಸಲಹೆ ಇವತ್ತು ಕೂಡ ಮುಂದುವರೆದುಕೊಂಡು ಹೋಗುತ್ತಿದೆ. ಜಿಲ್ಲಾ ಸಮ್ಮೇಳದಲ್ಲಿ ಇಡೀ ಕುಟುಂಬ ಒಂದೆಡೆ ಸೇರಿ ಆಚರಿಸಿರುವುದು ಮುಂದುವರೆದಿದೆ. ಇಡೀ ರಾಜ್ಯದಲ್ಲಿ ಮಾದರಿಯಾಗಿ ಶುರುವಾಗಿದ್ದು ಹಾಸನದಲ್ಲಿ. ಈ ಕ್ರೀಡಾಕೂಟದ ಮೂಲಕ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಅನುಕೂಲಕರವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗಾಗಿ ಓಟದ ಸ್ಪರ್ದೆ, ಗುಂಡು ಎಸೆತ, ಕ್ರಿಕೆಟ್ ಪಂದ್ಯಾವಳಿ ಇತರೆ ಆಟೋಟವನ್ನು ಏರ್ಪಡಿಸಲಾಗಿತ್ತು. ಹಾಸನ ಜಿಲ್ಲೆಯ ಎಲ್ಲಾ ತಾಲೂಕಿನ ಪತ್ರಕರ್ತರು ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಎಚ್.ಬಿ.ಮದನ್ ಗೌಡ, ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ರವಿನಾಕಲಗೂಡು, ಕಾಂಗ್ರೆಸ್ ಮುಖಂಡರಾದ ಗೌಡಗೆರೆ ಪ್ರಕಾಶ್, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಇರ್ಷಾದ್, ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ, ಹಿಮ್ಸ್ ಜಿಲ್ಲಾ ಸರ್ಜನ್ ಲೋಕೇಶ್, ಸರ್ಕಾರಿ ಕಲಾ ಕಾಲೇಜಿನ ಸತ್ಯಮೂರ್ತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ನಿಕಟಪೂರ್ವ ಅಧ್ಯಕ್ಷ ಬಾಳ್ಳುಗೋಪಾಲ್, ಉಪಾಧ್ಯಕ್ಷ ಕೆ.ಎಂ.ಹರೀಶ್, ಪ್ರಧಾನ ಕಾರ್ಯದರ್ಶಿ ಬಿ.ಶಿ.ಶಶಿಧರ್, ನಟರಾಜು, ಕುಮಾರ್, ನಾಗರಾಜ್ ಹೆತ್ತೂರು, ಜಿ.ಪ್ರಕಾಶ್, ಮಂಜುನಾಥ್, ಬೊಮ್ಮೇಗೌಡ, ರಾಷ್ಟ್ರೀಯ ಮಂಡಳಿ ಸದಸ್ಯ ಸುರೇಶ್ ಕುಮಾರ್, ನಿವೃತ್ತ ಪತ್ರಕರ್ತ ಸೋಮಣ್ಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

8ನೇ ಸೆಮಿಸ್ಟರ್‌ನಲ್ಲಿ 6 ತಿಂಗಳು ಕಡ್ಡಾಯ ಇಂಟರ್ನ್ ಶಿಪ್
ಕ್ರೀಡೆಯಲ್ಲಿ ಸೋಲು, ಗೆಲುವು ಸಮಾನವಾಗಿ ಸ್ವೀಕರಿಸಿ: ಆರ್ ಟಿಒ ಮಲ್ಲಿಕಾರ್ಜುನ್ ಕಿವಿಮಾತು