ಕ್ರೀಡೆ ಸಮಾಜ ಒಗ್ಗೂಡಿಸುವ ಸುಂದರ ವೇದಿಕೆ: ಅರುಣ್ ಮಾಚಯ್ಯ

KannadaprabhaNewsNetwork |  
Published : Nov 03, 2026, 03:00 AM IST
ಚಿತ್ರ : 31ಎಂಡಿಕೆ2 : ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ. | Kannada Prabha

ಸಾರಾಂಶ

ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಯುವ ಘಟಕ, ಮಹಿಳಾ ಘಟಕ ಹಾಗೂ ಮಡಿಕೆಬೀಡಿನ ಕುಲಾಲ ಕುಂಬಾರ ಬಾಂಧವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2 ಕ್ರೀಡಾಕೂಟಕ್ಕೆ ಮಾಯಮುಡಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಮಡಿಕೇರಿ : ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಯುವ ಘಟಕ, ಮಹಿಳಾ ಘಟಕ ಹಾಗೂ ಮಡಿಕೆಬೀಡಿನ ಕುಲಾಲ ಕುಂಬಾರ ಬಾಂಧವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2 ಕ್ರೀಡಾಕೂಟಕ್ಕೆ ಮಾಯಮುಡಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದ್ದು, ಇಂತಹ ಕ್ರೀಡಾಕೂಟಗಳನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕ್ರೀಡೋತ್ಸವ ಆಯೋಜಿಸಿರುವ ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ ಹಾಗೂ ಮಡಿಕೆಬೀಡಿನ ಕುಲಬಾಂಧವರಿಗೆ ಶುಭ ಹಾರೈಸಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಲಯನ್ ದಾಮೋದರ್ ಸಮುದಾಯದ ಬಾಂಧವ್ಯ ವೃದ್ಧಿಸುವ ಜೊತೆಗೆ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.ಸಮಾರಂಭದಲ್ಲಿ ಭಾಗಮಂಡಲ ತಲಕಾವೇರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾನಂಡ ಪ್ರತ್ಯು, ಗ್ರಾ.ಪಂ ಮಾಜಿ ಅಧ್ಯಕ್ಷ ಟಾಟೂ ಮೊಣ್ಣಪ್ಪ, ಮಾಜಿ ಸದಸ್ಯರಾದ ಸಿ.ಕೆ.ಪ್ರದೀಪ್, ಎ.ಎಸ್.ನಾಚಯ್ಯ, ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಜಯಮ್ಮ, ಶಿಕ್ಷಕಿ ರಾಗಿಣಿ, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಲಯನ್ ದಾಮೋದರ್, ಪದಾಧಿಕಾರಿ ಚಿನ್ನಪ್ಪ, ಉಪಾಧ್ಯಕ್ಷ ಎಂ.ಡಿ. ಸುರೇಶ್ ಕುಲಾಲ್, ಖಜಾಂಚಿ ಕೆ.ಎಸ್.ಗಿರೀಶ್, ಯುವ ಘಟಕದ ಅಧ್ಯಕ್ಷ ಜೆ.ಪಿ.ಕುಲಾಲ್, ಯುವ ಘಟಕದ ಉಪಾಧ್ಯಕ್ಷ ಪವನ್ ಕುಲಾಲ್, ಕ್ರೀಡಾಧ್ಯಕ್ಷ ಎಂ.ಡಿ. ಶಾಂತಕುಮಾರ್, ಸಂಘದ ಪದಾಧಿಕಾರಿ ಅಶ್ವತ್ ಮಡಿಕೆಬೀಡು, ಮಡಿಕೆಬೀಡು ಕುಲಾಲ ಕುಂಬಾರ ಸಂಘದ ಅಧ್ಯಕ್ಷ ಶಿವ ಹಾಗೂ ಶ್ರೀ ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಮಡಿಕೆಬೀಡಿನ ಕುಲಾಲ ಕುಂಬಾರ ಸಂಘದ ಪದಾಧಿಕಾರಿಗಳು ಹಾಗೂ ಕುಲಬಾಂಧವರು ಇದ್ದರು.

ಭಾನುವಾರ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಲಯನ್ ದಾಮೋದರ್ ಅಧ್ಯಕ್ಷತೆ ವಹಿಸಲಿದ್ದಾರೆ.ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ