ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಕ್ರೀಡಾಂಗಣದಲ್ಲಿ ಸರ್ಕಾರ ಹಾಗೂ ಶಾಲಾ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಾಲ್ಕು ದಿನಗಳ ಕಾಲ ನಡೆದ ಸ್ಕೂಲ್‌ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ 67ನೇ ರಾಷ್ಟ್ರ ಮಟ್ಟದ 19 ವರ್ಷದೊಳಗಿನ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾವಳಿ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಯಾವುದೇ ಕ್ರೀಡೆಯಲ್ಲಿ ಒಂದು ತಂಡ ಗೆಲುವು ಸಾಧಿಸಿದರೆ ಮತ್ತೊಂದು ತಂಡ ಸೋಲುವುದು ಸಹಜ. ಆದರೆ, ಭಾಗವಹಿಸುವಿಕೆ ಬಹಳ ಮುಖ್ಯ. ಕ್ರೀಡಾ ನಿಯಮಗಳನ್ನು ಅರ್ಥೈಸಿಕೊಂಡು ಕ್ರೀಡಾಸ್ಪೂರ್ತಿಯಿಂದ ಆಟವಾಡಿದರೆ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲಾ ಕ್ರೀಡಾಳುಗಳು ನಿಮ್ಮ ನಿಮ್ಮ ರಾಜ್ಯಗಳ ಕನಸಾಗಿದ್ದೀರಿ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ನೀವು ನಿಮ್ಮ ಪೋಷಕರಿಗೆ, ವಿದ್ಯೆ ಕಲಿಯುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ನಿಮ್ಮ ರಾಜ್ಯಕ್ಕೆ ಹೆಮ್ಮೆ ತಂದಿದ್ದೀರಿ ಎಂದರು.
ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ, ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚಲುವಯ್ಯ, ಕ್ರೀಡಾಧಿಕಾರಿ ಪಂಕಜ್ ದಿವೇದಿ, ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾದ ಶ್ರೀಧರ್, ಲಕ್ಷ್ಮೀನಾರಾಯಣ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು, ಚುಂಚನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಉಷಾ, ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಪ್ಪ, ಉಪನ್ಯಾಸಕ ಸಿ.ಆರ್.ಚಂದ್ರಶೇಖರ್, ದೈಹಿಕ ಶಿಕ್ಷಕ ಎಂಎನ್. ಪರಮಶಿವಯ್ಯ, ಮುಳಕಟ್ಟೆ ಶಿವಣ್ಣಗೌಡ ಸೇರಿದಂತೆ ಹಲವರು ಇದ್ದರು.
-ಪೂನಂ ರಾಬರ್ಟ್, ಉತ್ತರಾಖಂಡ ತಂಡದ ವ್ಯವಸ್ಥಾಪಕಿ.