ಕ್ರೀಡೆಗಳು ಮನುಷ್ಯನ ದೈಹಿಕ, ಮಾನಸಿಕ ಆರೋಗ್ಯ ಕಾಪಾಡುತ್ತವೆ: ಎಚ್.ಟಿ.ಮಂಜು

KannadaprabhaNewsNetwork |  
Published : Nov 01, 2026, 03:00 AM IST
31ಕೆಎಂಎನ್ ಡಿ18 | Kannada Prabha

ಸಾರಾಂಶ

ಕ್ರೀಡೆಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ತಂಡದ ಮನೋಭಾವ ಳೆಸಲು ಸಹಕಾರಿಯಾಗುತ್ತವೆ. ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವ ಮೂಲಕ ದೈಹಿಕವಾಗಿ ಸದೃಢರಾಗಬೇಕು. ಈ ಕ್ರೀಡಾಕೂಟಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕ್ರೀಡೆಗಳು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಜೊತೆಗೆ ಶಿಸ್ತು, ಸಹಕಾರ ಮತ್ತು ಪರಸ್ಪರ ಸೌಹಾರ್ದತೆಯನ್ನು ಬೆಳೆಸುತ್ತವೆ ಎಂದು ಶಾಸಕ ಎಚ್.ಟಿ.ಮಂಜು ಅಭಿಪ್ರಾಯಪಟ್ಟರು.

ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ವಿವಿಧ ತಂಡಗಳ ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ವಾಲಿಬಾಲ್ ಪಂದ್ಯಕ್ಕೆ ಸರ್ವ್ ಮಾಡುವ ಮೂಲಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ತಂಡದ ಮನೋಭಾವ ಳೆಸಲು ಸಹಕಾರಿಯಾಗುತ್ತವೆ. ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವ ಮೂಲಕ ದೈಹಿಕವಾಗಿ ಸದೃಢರಾಗಬೇಕು. ಈ ಕ್ರೀಡಾಕೂಟಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ. ಯುವ ಕ್ರೀಡಾಪಟುಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುತ್ತವೆ ಎಂಬ ಆಶಯವನ್ನು ಶಾಸಕರು ವ್ಯಕ್ತಪಡಿಸಿದರು.

ಕನ್ನಡ ರಾಜ್ಯೋತ್ಸವದ ಸಂಭ್ರಮದೊಂದಿಗೆ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಪಂದ್ಯಾವಳಿ ಆಯೋಜಿಸಿರುವುದು ವಿಶೇಷವಾಗಿತ್ತು. ಕ್ರೀಡಾಂಗಣದಲ್ಲಿ ಪಂದ್ಯಾವಳಿ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಸೇರಿದ್ದರು.

ಈ ವೇಳೆ ಪುರಸಭೆ ಮಾಜಿ ಸದಸ್ಯ ಗಿರೀಶ್, ಗ್ರಾಪಂ ಮಾಜಿ ಸದಸ್ಯ ಹೊಸಕೋಟೆ ಸಂದೇಶ್, ಮಿಲ್ ಬಾಲಕೃ।್ಣ, ವೆಂಕಟೇಶ್, ಶ್ರೀನಿವಾಸ್, ಶಾಸಕರ ಆಪ್ತ ಸಹಾಯಕ ಪ್ರತಾಪ್ ಅರಳಕುಪ್ಪೆ, ದೇವರಾಜು, ವಕೀಲ ಸರ್ವೇಶ್, ಸೇರಿದಂತೆ ಹಲವು ಗಣ್ಯರು, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ರಂಗಭೂಮಿ ಕಲಾವಿದ ನಾ.ಕೆಂಪೇಗೌಡರು ಆಯ್ಕೆ

ಪಾಂಡವಪುರ: ತಾಲೂಕಿನ ಮೇನಾಗರ ಗ್ರಾಮದ ರಂಗಭೂಮಿ ಕಲಾವಿದ ನಾ.ಕೆಂಪೇಗೌಡರು ಮಂಡ್ಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನಾ.ಕೆಂಪೇಗೌಡರು ಈವರೆಗೂ 64ಕ್ಕೂ ಅಧಿಕ ಪೌರಾಣಿಕೆ ನಾಟಕದಲ್ಲಿ ಕೃಷ್ಣ, ಅರ್ಜುನ, ದಶರಥ, ನಾರದ, ರಾಜವಿಕ್ರಮ, ರಾಜ ಸತ್ಯವೃತ, ಬ್ರಹ್ಮ ಹಾಗೂ ಈಶ್ವರ ಸೇರಿದಂತೆ ಅನೇಕ ಪಾತ್ರಗಳಲ್ಲಿ ಅಭಿನಹಿಸುವ ಮೂಲಕ ಜನಮೆಚ್ಚುಗೆ ಪಡೆದಿದ್ದಾರೆ. ಜತೆಗೆ ಶನಿಕಥಾ ವಾಚನ, ಗಾಯನವನ್ನು ಸಹ ಮೈಗೂಡಿಸಿಕೊಂಡಿದ್ದಾರೆ. ಶ್ರಾವಣ ಮಾಸ, ಕಾರ್ತಿಕ ಮಾಸ, ಮುಂತಾದ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಸಂಭಾವನೆ ಇಲ್ಲದೆ ಉಚಿತವಾಗಿ ನಡೆಸಿಕೊಟ್ಟಿದ್ದಾರೆ. ಇವರ ಈ ಈ ಸಾಧನೆ ಗುರುತಿಸಿ ಜಿಲ್ಲಾಡಳಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ