ಕ್ರೀಡೆಯಿಂದ ಶರೀರ, ಮನಸು ಸದೃಢ: ಪಿ.ಎಂ. ಸುಬ್ಬಯ್ಯ

KannadaprabhaNewsNetwork |  
Published : Aug 26, 2026, 03:00 AM IST
ಕ್ರೀಡಾಕೂಟ | Kannada Prabha

ಸಾರಾಂಶ

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಪಿ.ಎಂ. ಸುಬ್ಬಯ್ಯ ಹೇಳಿದರು.

ನಾಪೋಕ್ಲು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಪಿ.ಎಂ. ಸುಬ್ಬಯ್ಯ ಹೇಳಿದರು.ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಭಾಗಮಂಡಲ ವಲಯ ಪ್ರೌಢಶಾಲಾ ವಿಭಾಗದ ಬಾಲಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅರುಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಆರ್. ರಮೇಶ್ ಮಾತನಾಡಿ, ಸೋಲು ಗೆಲುವು ಸಾಮಾನ್ಯ. ಎರಡನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಟ್ಟೇಟಿರ ಕುಂಙಪ್ಪ ಮಾತನಾಡಿ , ಮೊಬೈಲ್ ಬಳಕೆಗೆ ಕಡಿವಾಣ ಹಾಕಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚಾಗಿ ತೊಡಗಿಸಿ ಕೊಂಡರೆ ಮಾನಸಿಕವಾಗಿ ಶಾರೀರಿಕವಾಗಿ ಸದೃಢರಾಗಬಹುದು ಎಂದರು.

ಮುಖ್ಯ ಶಿಕ್ಷಕ ಸಿ.ಆರ್. ಲೋಕೇಶ್ , ಸಿ.ಆರ್. ಲೋಕೇಶ್ ಮಾತನಾಡಿದರು. ಭಾಗಮಂಡಲ ವಲಯದ ಅಟಲ್ ಬಿಹಾರಿ ವಾಜಪೇಯಿ ಶಾಲೆ, ಕಾವೇರಿ ಪ್ರೌಢಶಾಲೆ, ಅರುಣ ಪ್ರೌಢಶಾಲೆ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ,, ಉದಯ ಪ್ರೌಢಶಾಲೆ ಹಾಗೂ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕಬಡ್ಡಿ ಪಂದ್ಯಾಟದಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡ , ಖೊಖೊ ಪಂದ್ಯಾಟದಲ್ಲಿ ಚೇರಂಬಾಣೆಯ ಅರುಣ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ, ವಾಲಿಬಾಲ್ ಪಂದ್ಯಾಟದಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡ ಹಾಗೂ ಥ್ರೋಬಾಲ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆಯಾದರು.

ಉದ್ಘಾಟನಾ ಸಮಾರಂಭದಲ್ಲಿ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ನಾಟೋಳಂಡ ವಿಜು ದೇವಯ್ಯ, ಮುಖ್ಯ ಶಿಕ್ಷಕ ಕುದುಪಜೆ ಕವನ್, ದೈಹಿಕ ಶಿಕ್ಷಣ ಶಿಕ್ಷಕ ಅಯ್ಯಪ್ಪ, ವಿವಿಧ ಪ್ರೌಢಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು. ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಲಂಗಾರಿನಲ್ಲಿ ಸಮಗ್ರ ಆರೋಗ್ಯ ಅಭಿಯಾನ: 120 ಮಂದಿಗೆ ಉಚಿತ ಆರೋಗ್ಯ ತಪಾಸಣೆ
ಕಸ್ತೂರಿರಂಗನ್ ವರದಿ ಗೊಂದಲ ನಿವಾರಣೆಗೆ ಆಗ್ರಹ