ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣ, ಸರ್ಕಾರಿ ನೌಕರರ ಭವನ, ಅಂಬೇಡ್ಕರ್ ಭವನದಲ್ಲಿ ಏ.5 ಮತ್ತು 6 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ತಿಳಿಸಿದರು.
ಕ್ರೀಡಾ ಕೂಟದಲ್ಲಿ ಭಾಗವಹಿಸುವ ಜಿಲ್ಲೆಯ ಸರ್ಕಾರಿ ನೌಕರರಿಗೆ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜಾ ಸೌಲಭ್ಯ ಕೂಡ ಇದೆ. ಹಾಗಾಗಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ರಾಜ್ಯ ಸರ್ಕಾರದ ಕಾಯಂ ನೌಕರರು ಏ.5ರಂದು ಬೆಳಗ್ಗೆ 9 ಗಂಟೆಯಿಂದ ನೆಹರೂ ಕ್ರೀಡಾಂಗಣದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾ ಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ ಧ್ವಜಾರೋಹಣ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಅಧಿಕಾರಿಗಳು, ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ:ಉತ್ತಮ ಸೇವೆ ಹಾಗೂ ಸಾಧನೆಗೈದ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ 2024 ಮತ್ತು 25ನೇ ಸಾಲಿನ ಎರಡು ವರ್ಷಗಳ ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏ. 14ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎರಡೂ ವರ್ಷಕ್ಕೂ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಪಣ್ಣ, ರಂಗನಾಥ್, ನರಸಿಂಹ ಮೂರ್ತಿ, ರವಿ, ದಿನೇಶ್, ಸುಮತಿ, ಸತೀಶ್, ಆಶೀರ್ ಇದ್ದರು.