ಇಂದು ಆಲೂರಲ್ಲಿ ಪತ್ರಕರ್ತರಿಗೆ ಕ್ರೀಡಾಕೂಟ

KannadaprabhaNewsNetwork |  
Published : Jun 28, 2025, 12:18 AM IST
ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಎಚ್. ವೇಣು ಕುಮಾರ್‌ ಇತರರು ಮಾತನಾಡಿದರು. | Kannada Prabha

ಸಾರಾಂಶ

ಆಲೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಬೆಳಗ್ಗೆ ೧೦ ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಮಾಜಿ ಶಾಸಕ ಎ. ಟಿ ರಾಮಸ್ವಾಮಿ ನೆರವೇರಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್, ಮಾಜಿ ಶಾಸಕರಾದ ಎಚ್. ಎಮ್ ವಿಶ್ವನಾಥ್, ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ ಮದನ ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಆಲೂರು ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತರಿಗೆ ಜೂನ್ ೨೮ರ ಶನಿವಾರದಂದು ಎರಡನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಎಚ್. ವೇಣುಕುಮಾರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಆಲೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಬೆಳಗ್ಗೆ ೧೦ ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಮಾಜಿ ಶಾಸಕ ಎ. ಟಿ ರಾಮಸ್ವಾಮಿ ನೆರವೇರಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್, ಮಾಜಿ ಶಾಸಕರಾದ ಎಚ್. ಎಮ್ ವಿಶ್ವನಾಥ್, ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ ಮದನ ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ಪತ್ರಕರ್ತರು ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಹಾಗೂ ಎಲ್ಲರೂ ಕ್ರೀಡಾಕೂಟಕ್ಕೆ ಪೂರಕವಾದ ಉಡುಪಿನೊಂದಿಗೆ ಆಗಮಿಸುವಂತೆ ಮನವಿ ಮಾಡಿದರು. ಕೆಸರುಗದ್ದೆ ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ವಾಲಿಬಾಲ್, ಕೆಸರುಗದ್ದೆ ಓಟದ ಸ್ಪರ್ಧೆ ಸೇರಿದಂತೆ ಇತರೆ ಪಂದ್ಯಗಳು ಜರುಗಲಿವೆ. ಜಿಲ್ಲೆಯ ಎಲ್ಲಾ ಪರ್ತಕರ್ತರು ಸರಿಯಾದ ಸಮಯಕ್ಕೆ ಆಗಮಿಸುವ ಮೂಲಕ ಕ್ರೀಡಾಕೂಟ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮೋಹನ್ ಕುಮಾರ್‌, ಕಾರ್ಯದರ್ಶಿ ಶ್ರೀನಿವಾಸ್, ಸಿ.ಬಿ. ಸಂತೋಷ್ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಹಿರಿಯ ಕಿರಿಯ ಪತ್ರಕರ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ