ಕ್ರೀಡಾಕೂಟ: ರೊಟ್ಟಿಗವಾಡ ಶಾಲೆಗೆ ಸಮಗ್ರ ವೀರಾಗ್ರಣಿ

KannadaprabhaNewsNetwork |  
Published : Aug 24, 2026, 02:45 AM IST
ಹಿರೇಗುಂಜಳ ಕ್ಲಸ್ಟರ್‌ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದ ರೊಟ್ಟಿಗವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ- ಬಾಲಕಿಯರು. | Kannada Prabha

ಸಾರಾಂಶ

ಕೊಡ್ಲಿವಾಡದಲ್ಲಿ ನಡೆದ ಹಿರೇಗುಂಜಳ ಕ್ಲಸ್ಟರ್‌ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ 2026-27ನೇ ಸಾಲಿನ 14 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ರೊಟ್ಟಿಗವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ.

ಕುಂದಗೋಳ: ಕೊಡ್ಲಿವಾಡದಲ್ಲಿ ನಡೆದ ಹಿರೇಗುಂಜಳ ಕ್ಲಸ್ಟರ್‌ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ 2026-27ನೇ ಸಾಲಿನ 14 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ರೊಟ್ಟಿಗವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ.

ಬಾಲಕರ ವಿಭಾಗದಲ್ಲಿ 200 ಮೀ, 400 ಮೀ, 600 ಮೀ, 4x100 ಮೀ. ರಿಲೆ, 80 ಮೀ. ಅಡೆತಡೆ ಓಟ, ಉದ್ದಜಿಗಿತ, ಎತ್ತರಜಿಗಿತ, ವಾಲಿಬಾಲ್ ಹಾಗೂ ಖೋ-ಖೋ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ 200 ಮೀ, 4x100 ಮೀ. ರಿಲೆ, ಎತ್ತರಜಿಗಿತ ಹಾಗೂ ಉದ್ದಜಿಗಿತ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದು ಸಾಧನೆ ಮೆರೆದಿದ್ದಾರೆ.

ಧೀರಜ್‌ಗೆ ವೈಯಕ್ತಿಕ ವೀರಾಗ್ರಣಿ

ಬಾಲಕರ ವಿಭಾಗದಲ್ಲಿ ಕುಮಾರ ಧೀರಜ ರೇವಣಕರ 200 ಮೀ, 80 ಮೀ. ಅಡೆತಡೆ ಓಟ ಹಾಗೂ ಉದ್ದಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಗೆ ಭಾಜನನಾಗಿದ್ದಾನೆ. ಆದೀನ್ ನದಾಫ್ 400 ಮೀ. ಓಟದಲ್ಲಿ ಪ್ರಥಮ, 100 ಮೀ. ಹಾಗೂ ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಸಮೃದ್ಧ ನಾವಿ ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. ನಿಖಿಲ್ ಮಣ್ಣಕ್ಕನವರ 600 ಮೀ. ಓಟದಲ್ಲಿ ಪ್ರಥಮ ಹಾಗೂ 80 ಮೀ. ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾನೆ.

ಕಾರ್ತಿಕ ಮರತಂಗಿ ಎತ್ತರ ಜಿಗಿತದಲ್ಲಿ ಪ್ರಥಮ ಹಾಗೂ 200 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದರೆ, ದ್ಯಾಮಣ್ಣ ಮರತಂಗಿ 400 ಮೀ. ಓಟದಲ್ಲಿ ದ್ವಿತೀಯ ಹಾಗೂ ಸಮರ್ಥ ಹೊಕ್ಕಳದ 600 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ನಿರ್ಮಲಾ ತಳವಾರ ಉದ್ದಜಿಗಿತ ಹಾಗೂ 200 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೀರ್ತನಾ ಕುರಿ ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ 100 ಮೀ. ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ. ಭುವನೇಶ್ವರಿ ಚನ್ನಪ್ಪಗೌಡ್ರ 200 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ. ಶಾಲೆಯ ವಿದ್ಯಾರ್ಥಿಗಳ ಈ ಸಾಧನೆಗೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸುವುದು ಅಗತ್ಯ: ಎ.ಎಸ್‌. ಪೊನ್ನಣ್ಣ
ಯುವಪೀಳಿಗೆಗೆ ಭತ್ತ ಕೃಷಿ ಅರಿವು ಅಗತ್ಯ: ಮಧುಕುಮಾರ್