ಕ್ರೀಡೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ ಜತೆಗೆ ವ್ಯಕ್ತಿತ್ವ ವಿಕಸನ

KannadaprabhaNewsNetwork |  
Published : Apr 18, 2026, 02:45 AM IST
ವಿಜಯಪುರ | Kannada Prabha

ಸಾರಾಂಶ

ಕ್ರೀಡೆ ಮತ್ತು ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಯೊಬ್ಬ ಮನುಷ್ಯನಲ್ಲಿ ಅವರಿಗೆ ಅರಿವಿಲ್ಲದಂತೆ ದೈಹಿಕ, ಮಾನಸಿಕ ಬೆಳವಣಿಗೆಯ ಜೊತೆಗೆ ವ್ಯಕ್ತಿತ್ವ ಕೂಡ ಬೆಳವಣಿಗೆಯಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ ರಾ.ಜಾಧವ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕ್ರೀಡೆ ಮತ್ತು ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಯೊಬ್ಬ ಮನುಷ್ಯನಲ್ಲಿ ಅವರಿಗೆ ಅರಿವಿಲ್ಲದಂತೆ ದೈಹಿಕ, ಮಾನಸಿಕ ಬೆಳವಣಿಗೆಯ ಜೊತೆಗೆ ವ್ಯಕ್ತಿತ್ವ ಕೂಡ ಬೆಳವಣಿಗೆಯಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ ರಾ.ಜಾಧವ ಹೇಳಿದರು.

ನಗರದ ಅಂಜುಮನ್‌ ಕಾನೂನು ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಒಳ್ಳೆಯ ವ್ಯಕ್ತಿ ಎಂದು ಗುರುತಿಸಿಕೊಳ್ಳಬೇಕಾದರೇ ಪ್ರತಿಯೊಬ್ಬರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಆತ್ಮವಿಶ್ವಾಸ ಬಂದು, ಧೈರ್ಯ, ನಾಯಕತ್ವ ಗುಣ, ಉತ್ತಮ ಕ್ರಿಯಾಶೀಲತೆ, ಸಮಾಜಮುಖಿ ಸೇವಾ ಮನೋಭಾವ ಹಾಗೂ ನೆಮ್ಮದಿಯ ಜೀವನ ಸಾಗಿಸಲು ಅನುಕೂಲ ಆಗುತ್ತದೆ ಎಂದು ವಿವರಿಸಿದರು.ಸಹಾಯಕ ಪ್ರಾಧ್ಯಾಪಕ ಪ್ರೊ.ಪ್ರದೀಪ ಸಂಕದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನಿಂದ ಮೂಲಭೂತ ಸೌಕರ್ಯಗಳನ್ನು ಆಡಳಿತ ಮಂಡಳಿ ಆದಿಯಾಗಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ದೈಹಿಕ ಶಿಕ್ಷಣ ನಿರ್ದೇಶಕರಾದ ತೌಫೀಕ್‌ ಕುಡಗಿಯವರು ಕೂಡಿ ಒದಗಿಸಿ ಕೊಡುತ್ತಿದ್ದು, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇದರ ಲಾಭ ಪಡೆದುಕೊಂಡು ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಕಾನೂನು ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಚದುರಂಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುವ ಅಮೀರ ಕೋರ್ತಿ, ಸಮೀರ್‌ ಕಾಜಿ, ಅವರನ್ನು ತರಬೇತುಗೊಳಿಸಿದ ಪವನ ಪುಜಾರಿ ಇವರಲ್ಲದೇ ಇನ್ನಿತರ ಆಟಗಾರರನ್ನು ಮತ್ತು ಎನ.ಎಸ್.ಎಸ್ ಶಿಬಿರದಲ್ಲಿ ಹೆಚ್ಚಿನ ಸಾಧನೆಯ ಮೂಲಕ ಗೌರವ ತಂದ ಕುಮಾರಿ ವಿದ್ಯಾ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದದಲ್ಲಿ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನೀಯರು ಭಾಗವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ತೌಫೀಕ್‌ ಕೂಡಗಿ ಸ್ವಾಗತಿಸಿದರು. ಸಮೀರ್‌ ಕಾಜಿ, ಝಯೀಮ್‌ ಇನಾಮದಾರ ಮತ್ತು ಸಂಗಡಿಗರು ನಾಡಗೀತೆ ಹಾಡಿದರು. ಮಶೂದ್‌ ಲಾಹೋರಿ ಕಾರ್ಯಕ್ರಮ ನಿರೂಪಿಸಿದರು. ಹೀನಾ ಪಾಟೀಲ ವಂದನಾರ್ಪಣೆ ಮಾಡಿದರು.ಭವಿಷ್ಯದಲ್ಲಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸುತ್ತ ಉತ್ತಮ ಸಮಾಜ ನಿರ್ಮಾಣ ಮಾಡುವುದರ ಜತೆಗೆ ಅನ್ಯಾಯದ ವಿರುದ್ಧ ಹೋರಾಡುವ ಮತ್ತು ನೊಂದವವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವರ್ತರಾಗುವ ತಾವು ಕಾಲೇಜಿನಲ್ಲಿ ಸಿಕ್ಕಿರುವ ಸೌಕರ್ಯಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಕಾಲೇಜಿಗೆ ಕೀರ್ತಿ ತರುವಂತರಾಗಬೇಕು.

-ಡಾ.ಅಶೋಕಕುಮಾರ ರಾ.ಜಾಧವ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ
ಉಕ್ಕು ಸಚಿವಾಲಯದ ಹಿಂದಿ ಸಲಹಾ ಸಮಿತಿಗೆ ಡಾ.ಸುನಿತಾ ಚವ್ಹಾಣ ನೇಮಕ