ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಮೂಡಿಸುವ ಕ್ರೀಡೆಗಳು

KannadaprabhaNewsNetwork |  
Published : Oct 05, 2026, 03:00 AM IST
ತಾಳಿಕೋಟಿ,1 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ತಾಳಿಕೋಟಿಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ಸಮಯಪಾಲನೆ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುತ್ತವೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಎಲ್.ಕೊಪ್ಪದ ಹೇಳಿದರು.

ಕನ್ನಡಪ್ರಭ ವಾರ್ತೆ ತಾಳಿಕೋಟಿ

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ಸಮಯಪಾಲನೆ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುತ್ತವೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಎಲ್.ಕೊಪ್ಪದ ಹೇಳಿದರು.ಸ್ಥಳೀಯ ಘನಮಠೇಶ್ವರ ಶಿಕ್ಷಣ ಸಂಸ್ಥೆಗಳ ಅಂತರ್ ಶಾಲಾ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕ್ರೀಡೆ ಕೇವಲ ಗೆಲುವು-ಸೋಲಿಗೆ ಸೀಮಿತವಾಗಿರದೇ ಜೀವನದ ಹಲವು ಮೌಲ್ಯಗಳನ್ನು ಕಲಿಸುತ್ತದೆ ಎಂದರು.ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಮಾತನಾಡಿ, ಪಂದ್ಯದಲ್ಲಿ ಗೆಲುವು ಸಾಧಿಸುವುದರ ಜೊತೆಗೆ ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುವುದು ಹಾಗೂ ಎದುರಾಳಿಯನ್ನು ಗೌರವಿಸುವುದು ಮುಖ್ಯವಾಗಿದೆ. ಗೆಲುವು ಆತ್ಮವಿಶ್ವಾಸ ಹೆಚ್ಚಿಸಿದರೇ, ಸೋಲು ತಪ್ಪುಗಳನ್ನು ಅರಿತು ಮತ್ತಷ್ಟು ಉತ್ತಮವಾಗಿ ಗೆಲುವಿಗಾಗಿ ಪ್ರಯತ್ನಿಸಲು ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ಎಸ್.ಸಿ.ಸಜ್ಜನ, ಆಡಳಿತಾಧಿಕಾರಿಗಳಾದ ವಿವೇಕಾನಂದ ಸಜ್ಜನ ಹಾಗೂ ಸಂಜನಾ ಸಜ್ಜನ, ಮುಖ್ಯಗುರು ಬಸವರಾಜ ಸಜ್ಜನ, ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಜಯಚಂದ್ರನ್, ಕನ್ನಡ ಮಾಧ್ಯಮ ಪ್ರಾಂಶುಪಾಲರಾದ ಆರ್.ಎಸ್.ದೇಸಾಯಿ, ಬೆಸ್ಟ್ ಪಿಯು ಕಾಲೇಜಿನ ಪ್ರಾಂಶುಪಾಲ ಎಂ.ಮಾರೆಣ್ಣ, ಸಂಸ್ಥೆಯ ದೈಹಿಕ ಶಿಕ್ಷಕ ಶಿವಾನಂದ ಸುನದೊಳಿ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಶಾಲೆಗಳ ಮುಖ್ಯಸ್ಥರು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಅಂತರ್-ಶಾಲಾ ಕ್ರೀಡಾಕೂಟ ಯಶಸ್ವಿಯಾಗಿ ಮುಕ್ತಾಯಗೊಂಡಿತು.ಬಾಕ್ಸ್‌..

ಕ್ರೀಡಾ ಪ್ರತಿಭೆ ಪ್ರದರ್ಶಿಸಿದ ವಿದ್ಯಾರ್ಥಿಗಳು

ಘನಮಠೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಘನಮಠೇಶ್ವರ ಸಿಬಿಎಸ್‌ಇ (ತಾಳಿಕೋಟಿ ಮತ್ತು ಮುದ್ದೇಬಿಹಾಳ), ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಗಳ ಅಂತರ್-ಶಾಲಾ ಖೋ-ಖೋ ಮತ್ತು ಕಬಡ್ಡಿ ಪಂದ್ಯಾವಳಿಗಳು ಉತ್ಸಾಹಭರಿತವಾಗಿ ಜರುಗಿದವು. ಒಂದೇ ಸಂಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆ, ತಂಡದ ಮನೋಭಾವ, ಶಿಸ್ತು ಹಾಗೂ ಕ್ರೀಡಾ ಸ್ಫೂರ್ತಿ ಬೆಳೆಸುವ ಉದ್ದೇಶದಿಂದ ಪಂದ್ಯಾವಳಿ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿಧ ಪಂದ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಿದರು.ಬಾಕ್ಸ್...

ಕಬಡ್ಡಿಯಲ್ಲಿ ಚಾಲುಕ್ಯ ಹೌಸ್, ಖೋ-ಖೋದಲ್ಲಿ ಹೊಯ್ಸಳ ಹೌಸ್ ಪ್ರಥಮಕಬಡ್ಡಿ ವಿಭಾಗದಲ್ಲಿ: ಘನಮಠೇಶ್ವರ ಸಿಬಿಎಸ್‌ಇ ಮಿಣಜಗಿ ಕ್ರಾಸ್ ಶಾಲೆಯ ಚಾಲುಕ್ಯ ಹೌಸ್ ಪ್ರಥಮ ಸ್ಥಾನ ಪಡೆದುಕೊಂಡರೆ, ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆಯ ಒಡೆಯರ್ ಹೌಸ್ ದ್ವಿತೀಯ ಸ್ಥಾನ ಗಳಿಸಿತು.

ಖೋ-ಖೋ ವಿಭಾಗದಲ್ಲಿ: ಶ್ರೀ ಘನಮಠೇಶ್ವರ ಸಿಬಿಎಸ್‌ಇ ಮಿಣಜಗಿ ಕ್ರಾಸ್ ಶಾಲೆಯ ಹೊಯ್ಸಳ ಹೌಸ್ ಪ್ರಥಮ ಸ್ಥಾನ ಪಡೆದರೆ, ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿಜಯನಗರ ಹೌಸ್ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾವಳಿಯ ಅಂತ್ಯದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ ಹಾಗೂ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಂಡವಾಳ ಶಾಹಿಗಳ ಹಿಡಿತದಲ್ಲಿ ಪ್ರಪಂಚ
ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಅಧಿಕಾರಕ್ಕೆ