ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು

KannadaprabhaNewsNetwork |  
Published : Jan 22, 2025, 12:31 AM IST
ಹಾಸನದ ರಾಜೀವ್ ಪಾಲಿಟೆಕ್ನಿಕ್ ಆವರಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು. | Kannada Prabha

ಸಾರಾಂಶ

ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು, ದೇಶಕ್ಕೆ ಸತ್ಪ್ರಜೆಯಾಗಬಲ್ಲರು, ಜೀವನದಲ್ಲಿ ಯಶಸ್ಸು ಗಳಿಸುವರು. ಏಕೆಂದರೆ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖವಿದ್ದಂತೆ, ಕ್ರೀಡಾಪಟುಗಳು ಮಾತ್ರ ಅದನ್ನು ಸಮನಾಗಿ ಸ್ವೀಕರಿಸುವರು. ಧರ್ಮ, ಜಾತಿ ಭೇದ ಇಲ್ಲದೆ ಇರುವುದು ಕ್ರೀಡೆಯಲ್ಲಿ ಮಾತ್ರ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ತಂದೆತಾಯಿ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಡುತ್ತಾರೆ, ಅವರ ತ್ಯಾಗಗಳಿಗೆ ಮಕ್ಕಳು ಸಾರ್ಥಕತೆಯನ್ನು ನೀಡಬೇಕು, ಆ ದೃಷ್ಟಿಯಲ್ಲಿ ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವನ್ನು ದೃಢಶಕ್ತಿ ಮತ್ತು ದೃಢಸಂಕಲ್ಪದಿಂದ ರೂಪಿಸಿಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು, ದೇಶಕ್ಕೆ ಸತ್ಪ್ರಜೆಯಾಗಬಲ್ಲರು, ಜೀವನದಲ್ಲಿ ಯಶಸ್ಸು ಗಳಿಸುವರು. ಏಕೆಂದರೆ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖವಿದ್ದಂತೆ, ಕ್ರೀಡಾಪಟುಗಳು ಮಾತ್ರ ಅದನ್ನು ಸಮನಾಗಿ ಸ್ವೀಕರಿಸುವರು. ಧರ್ಮ, ಜಾತಿ ಭೇದ ಇಲ್ಲದೆ ಇರುವುದು ಕ್ರೀಡೆಯಲ್ಲಿ ಮಾತ್ರ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಅವರು ಹಾಸನದ ರಾಜೀವ್ ಪಾಲಿಟೆಕ್ನಿಕ್ ಆವರಣದಲ್ಲಿ ರಾಜೀವ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಡಾ.ವಿ. ರಾಜೀವ್ ಅವರ ಸ್ಮರಣಾರ್ಥವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಬಾಲಕರ ವಾಲಿಬಾಲ್ ಪಂದ್ಯಾವಳಿ ಮತ್ತು ಸಿಬ್ಬಂದಿ ವರ್ಗದವರಿಗೆ ಡಬಲ್ಸ್ ಷಟಲ್ ಬ್ಯಾಡ್ಮಿಂಟನ್ ಟೂರ್ನಿ ರಾಜೀವ್ ವಾರಿಯರ್ಸ್ ಕಪ್ ೨೦೨೫ ಕಾರ್ಯಕ್ರಮವನ್ನು ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ತಂದೆತಾಯಿ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಡುತ್ತಾರೆ, ಅವರ ತ್ಯಾಗಗಳಿಗೆ ಮಕ್ಕಳು ಸಾರ್ಥಕತೆಯನ್ನು ನೀಡಬೇಕು, ಆ ದೃಷ್ಟಿಯಲ್ಲಿ ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವನ್ನು ದೃಢಶಕ್ತಿ ಮತ್ತು ದೃಢಸಂಕಲ್ಪದಿಂದ ರೂಪಿಸಿಕೊಳ್ಳಬೇಕು ಎಂದರು.

ಸಣ್ಣ ಪಂದ್ಯವೂ ಕ್ರೀಡಾಸ್ಫೂರ್ತಿಯನ್ನು ಹಿಡಿದಿಟ್ಟುಕೊಳ್ಳವಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಹಲವು ಕನಸುಗಳನ್ನು ಹೊತ್ತ ಕ್ರೀಡಾಪಟುಗಳು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಬದಲಾವಣೆ ಎನ್ನುವುದು ನಮ್ಮಮನಸ್ಸಿನಿಂದ ಬರಬೇಕು. ಆಗಲೇ ಕ್ರೀಡಾಕೂಟ ಆಯೋಜನೆಯ ಉದ್ದೇಶ ಸಾರ್ಥಕವಾಗುವುದು ಎಂದು ಹೇಳಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಷ್ಟ್ರೀಯ ಈಜು ಚಾಂಪಿಯನ್ ಹಾಗೂ ಹಾಸನದ ಆಯುಷ್ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಕೆ ರಾಮ ಪ್ರವೀಣ್ ಅವರು ಮಾತನಾಡಿ, ದೇಹಕ್ಕೆ ಸ್ಥಿರತೆಯನ್ನು ನೀಡಲು ವ್ಯಾಯಾಮ ಮುಖ್ಯ. ಸತತ ಪ್ರಯತ್ನ, ಪ್ರತಿನಿತ್ಯ ಅಭ್ಯಾಸದಿಂದ ಕ್ರೀಡೆಯಲ್ಲಾಗಲೀ, ವಿದ್ಯೆಯಲ್ಲಾಗಲೀ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ರಾಜ್ಯಮಟ್ಟದ ಪಾಲಿಟೆಕ್ನಿಕ್ ಬಾಲಕರ ವಾಲಿಬಾಲ್ ಪಂದ್ಯಾವಳಿ ಮತ್ತು ಸಿಬ್ಬಂದಿ ವರ್ಗದವರಿಗೆ ಡಬಲ್ಸ್ ಷಟಲ್ ಬ್ಯಾಡ್ಮಿಂಟನ್ ಟೂರ್ನಿ ಹಾಸನದ ರಾಜೀವ್ ಕಾಲೇಜಿನಲ್ಲಿ ಆಯೋಜಿಸಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.ಸಮಾರಂಭದಲ್ಲಿ ರಾಜೀವ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ.ಎನ್. ರತ್ನ ಮಾತನಾಡಿದರು. ಸಂಸ್ಥೆಯ ಉಪಾಧ್ಯಕ್ಷ ಡಾ. ರಂಜಿತ್ ರಾಜೀವ್, ರಾಜೀವ್ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ. ಶಂಕರೇಗೌಡ ಎಂ.ಆರ್, ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಮತ್ತು ಉಪನಿರ್ದೇಶಕ ಗಣೇಶ್ ಉಪಸ್ಥಿತರಿದ್ದರು. ಕ್ರೀಡಾಕೂಟಕ್ಕೆ ೧೫ ಜಿಲ್ಲೆಗಳಿಂದ ೩೦ ತಂಡಗಳು ಭಾಗವಹಿಸಿದ್ದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌