ಕ್ರೀಡಾಸ್ಫೂರ್ತಿ ಸಮಗ್ರ ವ್ಯಕ್ತಿತ್ವ ನಿರ್ಮಾಣಕ್ಕೆ ಅಡಿಗಲ್ಲು: ಶಶಾಂಕ್

KannadaprabhaNewsNetwork |  
Published : Sep 09, 2026, 01:15 AM IST
ದೊಡ್ಡಬಳ್ಳಾಪುರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು. | Kannada Prabha

ಸಾರಾಂಶ

ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಪ್ರತಿಯೊಬ್ಬ ಕ್ರೀಡಾಪಟುವೂ ಗೆಲುವು ಮತ್ತು ಸೋಲನ್ನು ಒಂದೇ ದೃಷ್ಟಿಯಿಂದ ಸ್ವೀಕರಿಸಿ ಮುನ್ನಡೆದಾಗ ಸಾಧಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ದೇಶದ ಕ್ರೀಡಾ ಸಾಧನೆ ಅಂತಾರಾಷ್ಟ್ರೀಯ ಮಟ್ಟದ ಗಣನೀಯ ಎನಿಸಿದೆ .

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಮತ್ತು ಸೂರ್ಯ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸುನೀತಾ, ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೖಹಿಕ ಶಕ್ತಿ ಮತ್ತು ಮಾನಸಿಕ ಸ್ಥಿರತೆಯನ್ನು ನೀಡುತ್ತವೆ. ಸ್ಪರ್ಧೆಗಳಲ್ಲಿ ಸೋಲು- ಗೆಲುವು ಸಹಜ. ಎಲ್ಲವನ್ನು ಸಮಚಿತ್ತವಾಗಿ ಸ್ವೀಕರಿಸುವವನೇ ನಿಜವಾದ ಕ್ರೀಡಾಪಟು. ಕ್ರೀಡಾ ಸಾಧನೆಯು ವ್ಯಕ್ತಿಯನ್ನು ಒಬ್ಬ ಸಮರ್ಥ ಹಾಗೂ ಸಮಚಿತ್ತದ ನಾಯಕನಾಗಿ ರೂಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸೂರ್ಯ ಕಾಲೇಜು ಪ್ರಾಂಶುಪಾಲ ಶಶಾಂಕ್ , ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಪ್ರತಿಯೊಬ್ಬ ಕ್ರೀಡಾಪಟುವೂ ಗೆಲುವು ಮತ್ತು ಸೋಲನ್ನು ಒಂದೇ ದೃಷ್ಟಿಯಿಂದ ಸ್ವೀಕರಿಸಿ ಮುನ್ನಡೆದಾಗ ಸಾಧಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ದೇಶದ ಕ್ರೀಡಾ ಸಾಧನೆ ಅಂತಾರಾಷ್ಟ್ರೀಯ ಮಟ್ಟದ ಗಣನೀಯ ಎನಿಸಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೊಂಗಾಡಿಯಪ್ಪ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್, ಲಾವಣ್ಯ ಕಾಲೇಜು ಪ್ರಾಂಶುಪಾಲ ಎಂ.ಸಿ. ಮಂಜುನಾಥ್ , ಶ್ರೀವಾಣಿ ಕಾಲೇಜು ಪ್ರಾಂಶುಪಾಲ ಬಿ.ಆರ್ ವೇಣುಗೋಪಾಲ್, ವಿದ್ಯಾನಿದಿ ಕಾಲೇಜು ಪ್ರಾಂಶುಪಾಲ ಬಾಲಕೃಷ್ಣ , ಬಾಶೆಟ್ಟಿಹಳ್ಳಿ ಸರ್ಕಾರಿ ಕಾಲೇಜು ಪ್ರಾಂಶುಪಾಲ ಟಿ.ಆರ್. ಶ್ರೀರಾಮೇಗೌಡ, ದೇವರಾಜ್ ಅರಸು ಕಾಲೇಜು ಪ್ರಾಂಶುಪಾಲ ಉಮೇಶ್ ಬಾವಿಕಟ್ಟೆ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ; ಜಾಗೃತಿ
ಬಗರ್‌ಹುಕುಂ ಜಮೀನು ವಶ ವಿರೋಧಿಸಿ ರೈತರ ಪ್ರತಿರೋಧ ಸಮಾವೇಶ