- ಕಲಿಯುಗದಲ್ಲಿ ಘರ್ಜಿಸಿದ ಕರ್ಣಾರ್ಜುನ ನಾಟಕ ಪ್ರದರ್ಶನ
- - -ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶ್ರೀ ರಾಮನವಮಿ ನಿಮಿತ್ತ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಪಾಲ್ಗೊಂಡರು.
ಶ್ರೀ ಆಂಜನೇಯ ಸ್ವಾಮಿ ದರ್ಶನ ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದು ಖುಷಿ ಕೊಟ್ಟಿದೆ. ಗ್ರಾಮಸ್ಥರೆಲ್ಲರೂ ತೋರಿದ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ ಎಂದರು.ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹೊರತರಬೇಕು. ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಟ್ಟು ದೊಡ್ಡ ಕನಸುಗಳನ್ನ ಬಿತ್ತಿ, ಸಾಕಾರಗೊಳಿಸುವಲ್ಲಿ ತಂದೆ ತಾಯಿಗಳ ಪಾತ್ರ ಬಹುಮುಖ್ಯವಾಗಿದೆ. ಬಡವರ ಮಕ್ಕಳು ಉತ್ತಮ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಗ ಹೋಗಬೇಕು. ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯಗಳು ಸಿಗುವಂತಾಗಬೇಕು. ಗುಣಮಟ್ಟದ ಶಿಕ್ಷಣ ಸಿಗಬೇಕು. ಆಗ ಮಾತ್ರ ಭವಿಷ್ಯದಲ್ಲಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕೆಪಿಸಿಸಿ ಎಸ್‌ಟಿ ಘಟಕ ರಾಜ್ಯ ಉಪಾಧ್ಯಕ್ಷ ಕೆ.ಪಿ.ಪಾಲಯ್ಯ, ಬಿಜೆಪಿ ಮುಖಂಡ ಬಿಸ್ತುವಳ್ಳಿ ಬಾಬಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ನಾಗರಾಜ್, ಡಾ.ಚಂದ್ರಪ್ಪ, ಮಲ್ಲಪ್ಪ, ಗೌರಿಪುರ ನಾಗರಾಜ್, ಹಿರಿಯರಾದ ಬಸಣ್ಣ, ಮಲ್ಲೇಶ್, ಬಿ.ಜಿ.ಪೂಜಾರ್, ಮಂಜುನಾಥ್, ಮುಖಂಡರು, ಗ್ರಾಮಸ್ಥರು ಹಾಜರಿದ್ದರು.ಈ ಸಂದರ್ಭದಲ್ಲಿ ಶ್ರೀ ಬೀರಲಿಂಗೇಶ್ವರ ನಾಟ್ಯ ಕಲಾ ಸಂಘದ ಸದಸ್ಯರು ಕಲಿಯುಗದಲ್ಲಿ ಘರ್ಜಿಸಿದ ಕರ್ಣಾರ್ಜುನ ನಾಟಕ ಪ್ರದರ್ಶಿಸಿದರು.
- - --8ಕೆಡಿವಿಜಿ31:
ಶ್ರೀ ಆಂಜನೇಯ ರಥೋತ್ಸವ ಹಿನ್ನೆಲೆ ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.