ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ: ಸಹಕಾರಕ್ಕೆ ಶಾಸಕಗೆ ಮನವಿ

KannadaprabhaNewsNetwork |  
Published : Jun 21, 2025, 12:49 AM IST
ಶಾಸಕರು ದೇವಾಲಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ | Kannada Prabha

ಸಾರಾಂಶ

ದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ 2 ಕೋಟಿ ರುಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಕಾಮಗಾರಿ ಸಂಬಂಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ ಮತ್ತು ಪ್ರಮುಖರು, ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರ್ಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯ ಹಿನ್ನೆಲೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ದೇವಾಲಯದ ಆವರಣಕ್ಕೆ ಭೇಟಿ ಮಾಡಿ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿದರು.ದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ 2 ಕೋಟಿ ರುಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಕಾಮಗಾರಿ ಸಂಬಂಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ ಮತ್ತು ಪ್ರಮುಖರು, ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರ್ಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭ ಮಾತನಾಡಿದ ಶಾಸಕರು, ಸರ್ಕಾರದ ಮೂಲಕ ಹೆಚ್ಚಿನ ಅನುದಾನ ಕಲ್ಪಿಸುವ ಭರವಸೆ ವ್ಯಕ್ತಪಡಿಸಿದರು. ಇದರೊಂದಿಗೆ ವೈಯಕ್ತಿಕವಾಗಿ ಕೂಡ ಸಹಕಾರ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ, 2027ರ ಒಳಗೆ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ದಾನಿಗಳಿಂದ ಕೂಡ ಅಗತ್ಯ ನೆರವು ಪಡೆಯುವ ಮೂಲಕ ಕಾವೇರಿ ನದಿ ತಟದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯ ನಡೆಯಲಿದೆ ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖ ಕೆ.ಎಸ್.ಕೆ. ಶ್ರೀನಿವಾಸರಾವ್ ಚಂದ್ರು, ಜೀರ್ಣೋದ್ಧಾರ ಸಮಿತಿ ಸಂಚಾಲಕ ವಿ.ಎಸ್. ಆನಂದಕುಮಾರ್, ಡಿ.ಪಿ. ಗಿರೀಶ್, ವಿನೋದ್ ಜೈನ್, ವಸಂತ್, ಯಶವಂತ್ ಮತ್ತಿತರರು ಇದ್ದರು.

ಬೈಚನಹಳ್ಳಿಗೆ ತೆರಳಿದ ಶಾಸಕ ಡಾ ಮಂತರ್ ಗೌಡ ಅವರು ಅಲ್ಲಿನ ಗ್ರಾಮ ದೇವತೆ ಕನ್ನಂಬಾಡಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ