ಕೂಗೋನಹಳ್ಳಿಯಲ್ಲಿ ಸಂಭ್ರಮದ ಶ್ರೀ ಭೈರವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

KannadaprabhaNewsNetwork |  
Published : May 21, 2026, 01:30 AM IST
ದೊಡ್ಡಬಳ್ಳಾಪುರ ತಾಲೂಕಿನ ಕೂಗೋನಹಳ್ಳಿ ಗ್ರಾಮದಲ್ಲಿ ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿ ಉತ್ಸವದ ಅಂಗವಾಗಿ ಮಹಿಳೆಯರಿಂದ ಆರತಿಗಳ ಮೆರವಣಿಗೆ ನಡೆಯಿತು. | Kannada Prabha

ಸಾರಾಂಶ

ಜಾತ್ರೆಯ ಅಂಗವಾಗಿ ಗಣಪತಿ ಹೋಮ, ರುದ್ರಾಭಿಷೇಕ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗ್ರಾಮ ದೇವರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿಗೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ, ಅನ್ನಸಂತರ್ಪಣೆ ಭಕ್ತಾದಿಗಳಿಂದ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ದೊಡ್ಡಬಳ್ಳಾಪುರ: ತಾಲೂಕಿನ ಕೂಗೋನಹಳ್ಳಿ ಗ್ರಾಮದಲ್ಲಿನ ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿ ಸೇವಾ ಅಭಿವೃದ್ಧಿ ಸಮಿತಿ ವತಿಯಿಂದ 12ನೇ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನೆರವೇರಿತು. ಜಾತ್ರೆಯ ಅಂಗವಾಗಿ ಗಣಪತಿ ಹೋಮ, ರುದ್ರಾಭಿಷೇಕ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗ್ರಾಮ ದೇವರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿಗೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ, ಅನ್ನಸಂತರ್ಪಣೆ ಭಕ್ತಾದಿಗಳಿಂದ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಂಗಳವಾರ ದೇವರ ಉತ್ಸವ, ಮೆರವಣಿಗೆ ಹಾಗೂ ಮಹಾಮಂಗಳಾರತಿ ಬಳಿಕ ಅನ್ನಸಂತರ್ಪಣೆ ನಡೆಯಿತು. ಮೂರು ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರುದ್ರಭೂಮಿಗಾಗಿ ವೀರಶೈವ ಲಿಂಗಾಯತ ಸಮಾಜದಿಂದ ತಹಸೀಲ್ದಾರರಿಗೆ ಮನವಿ
ಪರೀಕ್ಷಾ ಪ್ರಾಧಿಕಾರಗಳು ಜವಾಬ್ದಾರಿಯಿಂದ ಕೆಲಸ ಮಾಡಲಿ