ಕನ್ನಡಪ್ರಭ ವಾರ್ತೆ ಮಂಗಳೂರು
ಶಾಲಾ ಆವರಣದಲ್ಲಿರುವ ಶಂಕರಶ್ರೀ ಸಭಾಭವನದಲ್ಲಿ ನಡೆದ ಸಮಾರಂಭವನ್ನು ಸಹ್ಯಾದ್ರಿ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ ಮೆಂಟ್ ನ ಡೀನ್ ರಮೇಶ ಕೆ.ಜಿ. ಉದ್ಘಾಟಿಸಿದರು.ಈ ಸಂದರ್ಭ ರಮೇಶ ಕೆ.ಜಿ. ಅವರು ಮಾತನಾಡಿ, ವಿದ್ಯಾರ್ಥಿಗಳು ಕನಸು ಕಾಣುವುದರ ಜೊತೆಗೆ ಅದನ್ನು ನನಸು ಮಾಡುವ ಛಲವಿರಬೇಕೆಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಸಮೂಹ ಸಂಸ್ಥೆಯ ನಿರ್ದೇಶಕ ಗಿರೀಶ್ ಎಂ. ವಹಿಸಿದ್ದರು. ಸಕ್ಷಮ ಜಿಲ್ಲಾಧ್ಯಕ್ಷ ರಾಜಶೇಖರ ಭಟ್ ಕಾಕುಂಜೆ ಮಾತನಾಡಿ, ಮಕ್ಕಳ ಕಲಿಕೆಯು ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಎಲ್ಲವನ್ನೂ ನೋಡುತ್ತಾ ಮಾಡುತ್ತಾ ಕಲಿಯ ಬೇಕೆಂದು ಸಲಹೆ ನೀಡಿದರು.ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಮುಖ್ಯೋಪಾಧ್ಯಾಯ ಗಂಗಾರತ್ನ ಇದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ ೧೨ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ.
ಪ್ರಥಮವಾಗಿ ಘಟಿಕೋತ್ಸವ ಸಂದರ್ಭ ವೇದಿಕೆಯಲ್ಲಿ ಗಣ್ಯರಿಂದ ಪದವಿ ಸ್ವೀಕರಿಸುವ ವಿದ್ಯಾರ್ಥಿಗಳು, ಡಾಕ್ಟರಲ್ ಡಿಗ್ರಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು, ರಾಂಕ್/ಚಿನ್ನದ /ಪದಕ/ನಗದು ಬಹುಮಾನ ಪಡೆಯುವ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಅಭ್ಯರ್ಥಿಗಳು, ದ್ವಿತೀಯವಾಗಿ ಮುಖ್ಯ ಸಭಾ ಕಾರ್ಯಕ್ರಮ ಮುಗಿದ ನಂತರ ಪದವಿ ಪ್ರಮಾಣ ಪತ್ರ ಸ್ವೀಕರಿಸುವ ವಿದ್ಯಾರ್ಥಿಗಳು, ಪದವಿ/ಸ್ನಾತಕೋತ್ತರ ಪದವಿಯಲ್ಲಿ ೬ ಮತ್ತು ೬ಕ್ಕಿಂತ ಹೆಚ್ಚಿನ ಸರಾಸರಿ ನಂಚಿತ ವರ್ಗಾಂಶ (CGPA) ಪಡೆದು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲ ಸ್ನಾತಕ/ಸ್ನಾತಕೋತ್ತರ ಅಭ್ಯರ್ಥಿಗಳು online Registration ಮಾಡಿಕೊಳ್ಳಬೇಕು.
ಅರ್ಹ ಅಭ್ಯರ್ಥಿಗಳು ಪದವಿಯನ್ನು ಘಟಿಕೋತ್ಸವದಲ್ಲಿ ಹಾಜರಿ ಅಥವಾ ಗೈರುಹಾಜರಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಆದರೆ ಆಗಸ್ಟ್ ೩೧ ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾದ ಎಲ್ಲ ಪುನರಾವರ್ತಿತ ಅಭ್ಯರ್ಥಿಗಳು ಗೈರು ಹಾಜರಿಯಲ್ಲೇ ಪದವಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬೇಕು. ಘಟಿಕೋತ್ಸವದ ಅಧಿಕೃತ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ.
ಗೈರು ಹಾಜರಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕಾಲೇಜು/ಸ್ನಾತಕೋತ್ತರ ವಿಭಾಗಕ್ಕೆ ಕಳುಹಿಸಿ ಕೊಡಲಾಗುವುದು. ಅಂತಹ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಕಾಲೇಜು ಪ್ರಾಂಶುಪಾಲರಿಂದ / ವಿಭಾಗದ ಅಧ್ಯಕ್ಷರಿಂದ ಪಡೆದುಕೊಳಬೇಕು.
ಎಲ್ಲ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳ ಪ್ರಾಂಶುಪಾಲರುಗಳು/ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು ಎಲ್ಲಾ ಅರ್ಹ ಅಭ್ಯರ್ಥಿಗಳಿಂದ ನಿಗದಿತ ಶುಲ್ಕ ಸಂಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕಿನ ಶಾಖೆಗಳ ಮುಖಾಂತರ ವಿಶ್ವವಿದ್ಯಾನಿಲಯದ ನಿಧಿಗೆ ಜಮೆ ಆಗುವಂತೆ ಡಿ.ಡಿ./ಚಲನ್ ಮೂಲಕ ಅಥವಾ ವಿಶ್ವವಿದ್ಯಾನಿಲಯದ ಅಂತರ್ಜಾಲದ (www.mangaloreuniversity.ac.in) quick links online fees collection fees Examination Activities 008) ಮೂಲಕ ಪಾವತಿಸಿ ವಿದ್ಯಾರ್ಥಿಗಳ ವಿವರಗಳನ್ನು ಕುಲಸಚಿವರ (ಪ) ಕಚೇರಿಯಿಂದ ನೀಡಲ್ಪಟ್ಟ ನಿಗದಿತ ನಮೂನೆಯಲ್ಲಿ ಜನವರಿ ೧೫ರೊಳಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.