ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

KannadaprabhaNewsNetwork |  
Published : Mar 23, 2026, 03:00 AM IST
 ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು–ನಿಟ್ಟೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಿಟ್ಟೆಯ ಕೆಮ್ಮಣ್ಣು ಕಮಲಗುಡ್ಡ ಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರದಿಂದ ನಡೆಯಿತು | Kannada Prabha

ಸಾರಾಂಶ

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕೆಮ್ಮಣ್ಣು–ನಿಟ್ಟೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಿಟ್ಟೆಯ ಕೆಮ್ಮಣ್ಣು ಕಮಲಗುಡ್ಡ ಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಕಳ: ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕೆಮ್ಮಣ್ಣು–ನಿಟ್ಟೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಿಟ್ಟೆಯ ಕೆಮ್ಮಣ್ಣು ಕಮಲಗುಡ್ಡ ಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಳೆದು ಹೋದ ದಿನಗಳು ಮತ್ತೆ ಜೀವಂತವಾಗುವ, ಬಾಡಿದ ಸ್ನೇಹ ಮತ್ತೆ ಚಿಗುರುವ ಹಾಗೂ ಹಳೆಯ ದಿನಗಳನ್ನು ನೆನೆದು ಮತ್ತೆ ಕ್ರಿಯಾಶೀಲರಾಗುವ ಎಂಬ ಅರ್ಥಪೂರ್ಣ ಶೀರ್ಷಿಕೆಯಡಿ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಿ, ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿಸಲಾಯಿತು.ಕಳೆದ ಸಾಲಿನ ಅಧ್ಯಕ್ಷ ಡಾ. ಪ್ರಶಾಂತ್ ಕುಮಾರ್ ಕೆ. ಅವರು ಸ್ವಾಗತಿಸಿ, ತಮ್ಮ ಅಧ್ಯಕ್ಷೀಯ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಘದ ಬೆಳವಣಿಗೆಗೆ ಸದಸ್ಯರ ಏಕತೆ ಮತ್ತು ಸಹಕಾರವೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭ ಪೂರ್ವಾಧ್ಯಕ್ಷ ಡಾ. ರಘುನಂದನ್ ಕೆ.ಆರ್. ಅವರು ಸಂಸ್ಥೆಯ ಸ್ಥಾಪನೆ, ಬೆಳವಣಿಗೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಶ್ರೀ ಕೃಷ್ಣಾನಂದ ರಾವ್ ಅವರು 2023–25ನೇ ಸಾಲಿನ ಕಾರ್ಯಚಟುವಟಿಕೆಗಳ ವರದಿ ಮಂಡಿಸಿ, ಸಂಘವು ಕೈಗೊಂಡ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಸೇವಾ ಕಾರ್ಯಕ್ರಮಗಳನ್ನು ವಿವರಿಸಿದರು.ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಗಳಾಗಿ ಹೋಟೆಲ್ ರತ್ನಾ ಫಾರೆವರ್‌ನ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸ್ಥಳೀಯ ಪಂಚಾಯಿತಿ ಪ್ರತಿನಿಧಿ ಸಂತೋಷ್ ಶೆಟ್ಟಿ (ಪೊರ್ಕಳಗುತ್ತು) ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡು, ಸಂಘದ ಅಭಿವೃದ್ಧಿಗಾಗಿ ಹಲವು ಹೊಸ ಯೋಜನೆಗಳನ್ನು ರೂಪಿಸಿರುವುದಾಗಿ ತಿಳಿಸಿದರು. ಎಲ್ಲ ಸದಸ್ಯರ ಸಹಕಾರದೊಂದಿಗೆ ಈ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಸಂಘದ ಸ್ಥಾಪಕಾಧ್ಯಕ್ಷ ಡಾ. ದಿಲೀಪ್ ಕುಮಾರ್, ಪೂರ್ವಾಧ್ಯಕ್ಷ ಡಾ. ರಘುನಂದನ್ ಕೆ.ಆರ್., ಶ್ರೀ ಸುರೇಶ್ ಆಚಾರ್ಯ, ಡಾ. ಪ್ರಶಾಂತ್ ಕುಮಾರ್ ಹಾಗೂ ಹಿಂದಿನ ಸಾಲಿನ ಕಾರ್ಯದರ್ಶಿಗಳಾದ ಶ್ರೀ ಸುಧಾಕರ್ ಮಡಿವಾಳ ಮತ್ತು ಶ್ರೀ ಕೃಷ್ಣಾನಂದ ರಾವ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಹಿರಿಯ ಸದಸ್ಯ ಸತೀಶ್ ಶೆಟ್ಟಿ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಕಾಶ್ ಸಾಲ್ಯಾನ್, ಕ್ರೀಡಾ ಕಾರ್ಯದರ್ಶಿ ಸಾಹಿಲ್ ಎಸ್. ಪೂಜಾರಿ, ಕೋಶಾಧಿಕಾರಿ ವಿಠಲ್ ಆಚಾರ್ಯ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೂಡಿಕೆ ನೆಪದಲ್ಲಿ ಮಹಿಳೆಗೆ 11.75 ಲಕ್ಷ ರು. ವಂಚನೆ
110 ಐನ್ ಮನೆಗಳ ಅಭಿವೃದ್ಧಿಗೆ 4.50 ಕೋಟಿ ರು. ಮೀಸಲು: ಶಾಸಕ ಪೊನ್ನಣ್ಣ