ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.17ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವಿಯ ಉತ್ಸವ ನಡೆಯಲಿದೆ. ಮಧ್ಯಾಹ್ನ 3ಗಂಟೆಗೆ ದೀಪ ಪ್ರಜ್ವಲನಾ, ಅನುಜ್ಞೆ ಗಂಗೆ ಪೂಜೆ, ಮಹಾಗಣಪತಿ ಹೋಮ, ನವಗ್ರಹ ಶಾಂತಿ ಹೋಮ, ಮೃತ್ಯುಂಜಯ ಹೋಮ ಹಾಗೂ ದುರ್ಗಿ ಹೋಮ, ಸಂಜೆ 6 ಗಂಟೆಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಜಮದಗ್ನಿ ಹಾಗೂ ಶ್ರೀ ಎಲ್ಲಮ್ಮದೇವಿ ಕಲ್ಯಾಣೋತ್ಸವ ಕಾರ್ಯಕ್ರಮಗಳು ಜರುಗಲಿವೆ.
ಫೆ.18ರಂದು ಬೆಳಗ್ಗೆ 9.30 ಗಂಟೆಗೆ ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿರುವ ಶ್ರೀ ಗಣಪತಿ ದೇವಸ್ಥಾನದಿಂದ ಹೂ ಹೊಂಬಾಳೆ, ವೀರಗಾಸೆ ಕುಣಿತ ಮತ್ತು ತಮಟೆ ವಾದ್ಯದೊಂದಿಗೆ ಶ್ರೀ ಎಲ್ಲಮ್ಮದೇವಿ, ಉಪ್ಪಾರಹಳ್ಳಿ ಶ್ರೀ ಆಂಜನೇಯಸ್ವಾಮಿ ಹಾಗೂ ಪಟ್ಟಣದ ಶಕ್ತಿದೇವತೆ ಶ್ರೀ ಬಡಗೂಡಮ್ಮ ದೇವರ ಉತ್ಸವ ಹಾಗೂ ಶ್ರೀ ಎಲ್ಲಮ್ಮದೇವಿ ರಥೋತ್ಸವ ನಡೆಯಲಿದೆ.ಜಾತ್ರಾ ಮಹೋತ್ಸವಕ್ಕಾಗಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಸಹಸ್ರಾರು ಭಕ್ತರಿಗೆ ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಪಟ್ಟಣ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಈ ಜಾತ್ರಾ ಮಹೋತ್ಸವವನ್ನುಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಅರಕೆರೆ ಕುಮಾರ್ ಗೋಷ್ಠಿಯಲ್ಲಿಇದ್ದರು.