ನಾಳೆ ಶ್ರೀ ಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜು ಕಟ್ಟಡ ಲೋಕಾರ್ಪಣೆ

KannadaprabhaNewsNetwork |  
Published : Apr 28, 2026, 02:15 AM IST
ಪೊಟೋ ಪೈಲ್ : 27ಬಿಕೆಲ್1 | Kannada Prabha

ಸಾರಾಂಶ

ಪಟ್ಟಣದ ಬಂದರು ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ಸನಿಹದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಕಟ್ಟಡ ಎ. 29ರಂದು ಬೆಳಗ್ಗೆ 8.13ಕ್ಕೆ ಲೋಕಾರ್ಪಣಗೊಳ್ಳಲಿದೆ.

ಕನ್ನಡಪ್ರಭ ವಾರ್ತೆ ಭಟ್ಕಳ

ಪಟ್ಟಣದ ಬಂದರು ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ಸನಿಹದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಕಟ್ಟಡ ಎ. 29ರಂದು ಬೆಳಗ್ಗೆ 8.13ಕ್ಕೆ ಲೋಕಾರ್ಪಣಗೊಳ್ಳಲಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಮೆನೆಜರ್ ರಾಜೇಶ ನಾಯಕ, ಕಾಲೇಜಿನ ನೂತನ ಕಟ್ಟಡ ಮತ್ತು ಗೀತಾ ವಾಮನ ಶಾನಭಾಗ ಬ್ಲಾಕ್‌ನ್ನು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಚಿವ ಮಂಕಾಳ ವೈದ್ಯ, ಪುಣೆಯ ಕೈಗಾರಿಕೋದ್ಯಮಿ ಸದಾನಂದ ಬಾಳಿಗಾ, ಡಿಡಿಪಿಐ ಸತೀಶ್‌ ನಾಯ್ಕ, ಬೆಂಗಳೂರಿನ ಸಾಗರ್‌ ಆಸ್ಪತ್ರೆಯ ವೈದ್ಯ ಡಾ. ದೇವೇಂದ್ರ ನಾಯ್ಕ ಹಾಗೂ ಬ್ಯಾಂಕ್‌ ಆಫ್ ಮಹಾರಾಷ್ಟ್ರದ ವಲಯ ವ್ಯವಸ್ಥಾಪಕ ಸುಚೇತ್‌ ಡಿಸೋಜಾ ಪಾಲ್ಗೊಳ್ಳಲಿದ್ದಾರೆ ಎಂದರು.

ಶ್ರೀ ಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜು ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ 8 ವಿದ್ಯಾಕೇಂದ್ರಗಳಲ್ಲೊಂದಾಗಿದೆ. ಈ ಕಾಲೇಜನ್ನು ತಾಲೂಕಿನ ವಿದ್ಯಾರ್ಥಿಗಳಿಗೆ ಪಿಯು ಶಿಕ್ಷಣ ಪಡೆಯಲು 1995ರಲ್ಲಿ ಸ್ಥಾಪಿಸಲಾಗಿದೆ. ಕಳೆದ ೩೦ ವರ್ಷಗಳಿಂದ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕಾಲೇಜು ಮಂಚೂಣಿಯಲ್ಲಿದ್ದು, ಪದವಿ ಪೂರ್ವ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳನ್ನು ಹೊಂದಿದ್ದು, ಸಿಇಟಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿದೆ. ವರ್ಷಂಪ್ರತಿ ಅತ್ಯುತ್ತಮ ಫಲಿತಾಂಶ ದಾಖಲಿಸುವುದರ ಮೂಲಕ ತನ್ನದೇ ಆದ ಚಾಪು ಮೂಡಿಸಿದೆ. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಕಾಲೇಜಿಗೆ ದಾನಿಗಳ ಸಹಕಾರದಿಂದ ತನ್ನದೇ ಸುಸಜ್ಜಿತವಾದ ಸ್ವಂತ ಕಟ್ಟಡ ನಿರ್ಮಿಸಲಾಗಿದೆ ಎಂದರು.

ಈ ಸಂದರ್ಭ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ, ಟ್ರಸ್ಟಿಗಳಾದ ಪ್ರದೀಪ ಪೈ, ನಾಗೇಶ ಭಟ್, ರಮೇಶ ಖಾರ್ವಿ, ವಿದ್ಯಾಧಿರಾಜ ಪಿಯು ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ, ಸುಧೀಂದ್ರ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ ಪೈ, ನ್ಯೂ ಇಂಗ್ಲಿಷ್ ಸ್ಕೂಲಿನ ಮುಖ್ಯಶಿಕ್ಷಕ ಗಣಪತಿ ಶಿರೂರು, ವಿದ್ಯಾಭಾರತಿ ಶಾಲೆಯ ಮುಖ್ಯಶಿಕ್ಷಕಿ ರೂಪಾ ಖಾರ್ವಿ ಮುಂತಾದವರಿದ್ದರು.

-------

27ಬಿಕೆಲ್1: ಭಟ್ಕಳದ ಬಂದರು ರಸ್ತೆಯ ಸನಿಹದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನವರು ನಿರ್ಮಿಸಿದ ಶ್ರೀ ಗುರು ವಿದ್ಯಾಧಿರಾಜ ಪಿಯು ಕಾಲೇಜು ನೂತನ ಕಟ್ಟಡ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶರಣರ ವಚನ ಸಾಹಿತ್ಯ ಪ್ರೇರಣಾದಾಯಕ
ಬಸವಣ್ಣ ನಾನು ಲಿಂಗಾಯತ ಧರ್ಮದವನು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ