ವಿಜೃಂಭಣೆಯಿಂದ ಜರುಗಿದ ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾರಥೋತ್ಸವ

KannadaprabhaNewsNetwork |  
Published : May 10, 2026, 01:30 AM IST
ಭದ್ರಾವತಿ ಹಳೇನಗರದ ಡಾ. ಪುನೀತ್ ರಾಜಕುಮಾರ್ ರಸ್ತೆ(ತಾಲೂಕು ಕಛೇರಿ ರಸ್ತೆ)ಯ ಕಂಚಿನ ಬಾಗಿಲು ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾ ರಥೋತ್ಸವ ಶನಿವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. | Kannada Prabha

ಸಾರಾಂಶ

ಹಳೇನಗರದ ಡಾ. ಪುನೀತ್ ರಾಜಕುಮಾರ್ ರಸ್ತೆ(ತಾಲೂಕು ಕಚೇರಿ ರಸ್ತೆ)ಯ ಕಂಚಿನ ಬಾಗಿಲು ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾ ರಥೋತ್ಸವ ಶನಿವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.

ಭದ್ರಾವತಿ: ಹಳೇನಗರದ ಡಾ. ಪುನೀತ್ ರಾಜಕುಮಾರ್ ರಸ್ತೆ(ತಾಲೂಕು ಕಚೇರಿ ರಸ್ತೆ)ಯ ಕಂಚಿನ ಬಾಗಿಲು ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾ ರಥೋತ್ಸವ ಶನಿವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.

ಪ್ರತಿ ವರ್ಷದಂತೆ ಈ ಬಾರಿ ಸಹ ಮಧ್ಯಾಹ್ನ ೧೨.೩೦ ಸಮಯಕ್ಕೆ ಮಹಾ ರಥೋತ್ಸವದ ಧಾರ್ಮಿಕ ಆಚರಣೆಗಳು ಆರಂಭಗೊಂಡು ೧.೩೦ರ ಸುಮಾರಿಗೆ ಅಲಂಕೃತಗೊಂಡ ತೇರಿನಲ್ಲಿ ಶ್ರೀ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿ ತೇರು ಎಳೆಯುವ ಮೂಲಕ ಭಕ್ತಿ ಮೆರೆದರು. ತೇರು ರಂಗಪ್ಪ ವೃತ್ತದವರೆಗೆ ಸಾಗಿ ಪುನಃ ಹಿಂದಿರುಗಿ ಕಂಚಿನಬಾಗಿಲುವರೆಗೂ ಸಾಗಿ ಪುನಃ ದೇವಸ್ಥಾನಕ್ಕೆ ಹಿಂದಿರುಗಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಪವನ್ ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ಹಳೇನಗರದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ. ರಮಾಕಾಂತ ಹಾಗೂ ಇನ್ನಿತರ ದೇವಸ್ಥಾನಗಳ ಅರ್ಚಕರು ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದರು.

ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೆ. ನರಸಿಂಹಮೂರ್ತಿ, ಪದಾಧಿಕಾರಿಗಳು ಹಾಗೂ ನಗರಸಭೆ ಸದಸ್ಯರಾದ ಬಿ.ಟಿ ನಾಗರಾಜ್, ಬಿ.ಎಂ ಮಂಜುನಾಥ್, ಕಾಂತರಾಜ್ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಸೇವಾಕರ್ತರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು. ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭ್ರಷ್ಟಾಚಾರದ ವಿರುದ್ಧ ವಾಟಾಳ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ: ವಾಟಾಳ್ ನಾಗರಾಜ್
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ಹಬ್ಬ ಆಚರಿಸಿದ ಅರಕೆರೆ ಗ್ರಾಮಸ್ಥರು