ಕನ್ನಡಪ್ರಭ ವಾರ್ತೆ ಮಡಿಕೇರಿ
ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಿತು.
ಶುಕ್ರವಾರ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ನಡೆಯಿತು. ಶನಿವಾರ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ಶ್ರದ್ಧಾಭಕ್ತಿಯಿಂದ ಜರುಗಿತು.ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ಪ್ರಯುಕ್ತ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ, ನಾಗದರ್ಶನ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಉಡುಪಿಯ ಪೆರ್ಲಂಬಾಡಿಯ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಟ್ಟರು.
ನೆರೆದಿದ್ದ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.