ಶ್ರೀಕೃಷ್ಣನ ಗೀತೋಪದೇಶ ಸಾರ್ವಕಾಲಿಕ: ಡಾ. ಎಂ.ಸಿ.ಸುಧಾಕರ್

KannadaprabhaNewsNetwork |  
Published : Aug 18, 2025, 12:00 AM IST
ಶ್ರೀಕೃಷ್ಣ  | Kannada Prabha

ಸಾರಾಂಶ

ಕಾರ್ಯಕ್ರಮಕ್ಕೂ ಮುನ್ನ ಶ್ರೀಕೃಷ್ಣ ವೇಷಧಾರಿಗಳು, ಪೂರ್ಣಕುಂಭ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ವೀರಗಾಸೆ ಹಾಗೂ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಚಿಂತಾಮಣಿ

ಕುರುಕ್ಷೇತ್ರ ಯುದ್ಧದಲ್ಲಿ ಅಣ್ಣ- ತಮ್ಮಂದಿರು, ಸಂಬಂಧಿಕರೊಂದಿಗೆ ಹೋರಾಡಬೇಕಾದರೆ ಅರ್ಜುನನಿಗೆ ಶ್ರೀಕೃಷ್ಣನು ಬೋಧಿಸಿದ ಗೀತೋಪದೇಶವು ಸರ್ವಕಾಲಕ್ಕೂ ಸನ್ನಿಹಿತವಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನುಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ತಾಪಂ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಬಾಗವಹಿಸಿ ಮಾತನಾಡಿ, ಜೀವನದಲ್ಲಿ ಏರುಪೇರು ಸುಖ, ದು:ಖ ಸಹಜವಾಗಿದ್ದು, ಯಾವುದಕ್ಕೂ ಧೃತಿಗೆಡದೇ ನಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಾ ಹೋದಾಗ ಪ್ರತಿಫಲವು ತಾನಾಗಿಯೇ ಲಭಿಸುತ್ತದೆ ಎಂದು ಶ್ರೀಕೃಷ್ಣ ಪರಮಾತ್ಮ ಹೇಳಿದ್ದಾರೆ. ಆದ್ದರಿಂದ ನಾವು ಕೃಷ್ಣನ ಆದರ್ಶ, ಮಾರ್ಗದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀಕೃಷ್ಣ ವೇಷಧಾರಿಗಳು, ಪೂರ್ಣಕುಂಭ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ವೀರಗಾಸೆ ಹಾಗೂ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.

ನಂತರ ಸಮುದಾಯದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ತಹಸೀಲ್ದಾರ್ ಸುದರ್ಶನ್ ಯಾದವ್, ತಾಪಂ ಇಒ ಎಸ್.ಆನಂದ್, ನಗರಸಭಾ ಅಧ್ಯಕ್ಷ ಆರ್.ಜಗನ್ನಾಥ್, ಉಪಾಧ್ಯಕ್ಷೆ ರಾಣಿಯಮ್ಮ, ಪೌರಾಯುಕ್ತ ಜಿ.ಎನ್.ಚಲಪತಿ, ಬಿಇಒ ಉಮಾದೇವಿ, ನಗರಸಭಾ ಸದಸ್ಯರು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶ್ರೀನಾಥ್, ಕೃಷಿಕ ಸಮಾಜದ ಅಧ್ಯಕ್ಷ ಜಯರಾಮರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿನಾರಾಯಣಪ್ಪ, ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಅಶೋಕ್ ಕುಮಾರ್, ಕಸಾಪ ಅಧ್ಯಕ್ಷ ಎನ್.ವಿ.ಶ್ರೀನಿವಾಸ್, ತಾಲೂಕು ಯಾದವ ಸಂಘದ ಅಧ್ಯಕ್ಷ ಪುಂಗನೂರು, ನಾರಾಯಣಸ್ವಾಮಿ, ಖಜಾಂಚಿ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ