ಕನ್ನಡಪ್ರಭ ವಾರ್ತೆ ಬಂಟ್ವಾಳ
ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಪ್ರಧಾನ ಭಾಷಣಕಾರ ಹಾಗೂ ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ, ಶ್ರೀಕೃಷ್ಣ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದ್ದು, ಅವರ ಆದರ್ಶಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಹೀಗಾಗಿ ಸಮಾಜದ ಎಲ್ಲ ವರ್ಗದವರೂ ಕೃಷ್ಣಜಯಂತಿಯನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಶ್ರೀಕೃಷ್ಣನ ಜೀವನ ಸಂದೇಶಗಳು ಸಮಾಜದ ಪ್ರತಿಯೊಬ್ಬರಿಗೂ ತಲುಪಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂದರು.
ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಕಂದಾಯ ಇಲಾಖೆ ಸಿಬ್ಬಂದಿ ಜನಾರ್ದನ್ ವಂದಿಸಿದರು.