೧೧ರಂದು ಶ್ರೀಕೃಷ್ಣಾರ್ಪಣಂ ಸಮಾರಂಭ: ಆಮಂತ್ರಣ ಬಿಡುಗಡೆ

KannadaprabhaNewsNetwork |  
Published : Oct 06, 2025, 01:01 AM IST
ಫೋಟೋ ಅ.೪ ವೈ.ಎಲ್.ಪಿ. ೦೧ | Kannada Prabha

ಸಾರಾಂಶ

ಸುಜ್ಞಾನ ಸೇವಾ ಸಂಸ್ಥೆ ಉತ್ತರ ಕನ್ನಡ, ಗೌತಮ ಜುವೆಲ್ಲರ್ಸ್ ಯಲ್ಲಾಪುರ ಹಾಗೂ ಹ್ಯಾಂಗ್ಯೋ ಐಸ್ ಕ್ರೀಂ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಯೋಗದಲ್ಲಿ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು ಅ.೧೧ರಂದು ಬೆಳಗ್ಗೆ ೧೦.೩೦ಕ್ಕೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ನಡೆಯಲಿದೆ ಎಂದು ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್. ಭಟ್ಟ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಯಲ್ಲಾಪುರ

ಸುಜ್ಞಾನ ಸೇವಾ ಸಂಸ್ಥೆ ಉತ್ತರ ಕನ್ನಡ, ಗೌತಮ ಜುವೆಲ್ಲರ್ಸ್ ಯಲ್ಲಾಪುರ ಹಾಗೂ ಹ್ಯಾಂಗ್ಯೋ ಐಸ್ ಕ್ರೀಂ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಯೋಗದಲ್ಲಿ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು ಅ.೧೧ರಂದು ಬೆಳಗ್ಗೆ ೧೦.೩೦ಕ್ಕೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ನಡೆಯಲಿದೆ ಎಂದು ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್. ಭಟ್ಟ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷ ಫೋಟೋ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಸಾಧಕರಿಗೆ ಪ್ರತಿಷ್ಠಿತ ಸುಜ್ಞಾನ ಸಮ್ಮಾನ್ ಪ್ರಶಸ್ತಿ ಪ್ರದಾನ, ಶ್ರೀಕೃಷ್ಣ ನೃತ್ಯಾಮೃತ, ಶ್ರೀಕೃಷ್ಣ ಗಾನಾಮೃತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.

ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಲಿದ್ದು, ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್. ಭಟ್ಟ ತಟ್ಟಿಗದ್ದೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಗಾಯಕಿ ಜೀ ಕನ್ನಡ ಸರಿಗಮಪ, ಸೋನಿ ಸೂಪರ್ ಸ್ಟಾರ್ ಸಿಂಗರ್ ದಿಯಾ ಹೆಗಡೆ, ಖ್ಯಾತ ಜ್ಯೋತಿಷಿ ವಿ.ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಗೌತಮ್ ಜುವೆಲ್ಲರ್ಸ್ ಮಾಲೀಕ ಪ್ರಕಾಶ ಶೇಟ್, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಸಂಕಲ್ಪ ಸೇವಾ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಡಿಸಿಎಫ್ ಹರ್ಷಭಾನು, ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ, ಶಿವಲಿಂಗಯ್ಯ ಅಲ್ಲಯ್ಯನವರಮಠ್, ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಡಾ. ಆರ್.ಡಿ .ಜನಾರ್ದನ, ಗ್ರಾಮದೇವಿ ದೇವಸ್ಥಾನದ ಅಧ್ಯಕ್ಷ ರಾಜೇಂದ್ರ ಪ್ರಸಾದ ಭಟ್ಟ, ರಂಗಸಹ್ಯಾದ್ರಿ ಅಧ್ಯಕ್ಷ ಡಿ.ಎನ್. ಗಾಂವ್ಕಾರ್, ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ. ಹೆಗಡೆ, ಉದ್ಯಮಿ ಮಂಜುನಾಥ ಜನ್ನು ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶ್ರೀಮಠದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸುಜ್ಞಾನ ಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ಟ ಯಲ್ಲಾಪುರ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.

PREV

Recommended Stories

ಪಿಎಸ್‌ಐ 545 ಹುದ್ದೆಗಳ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ
ಕನ್ನಡಿಗ ಪಾಟೀಲ್‌ಗೆ ಅಮೆರಿಕ ಎಐ ಕಂಪನಿಯ ಉನ್ನತ ಹುದ್ದೆ