ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: 125 ದಿನಗಳ ಭಜನಾ ಮಹೋತ್ಸವ ಸಂಪನ್ನ

KannadaprabhaNewsNetwork |  
Published : Jun 04, 2025, 02:26 AM IST
3ಭಜನೆ | Kannada Prabha

ಸಾರಾಂಶ

ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನದಲ್ಲಿ, ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವ (125 ವರ್ಷದ) ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ಮಂಗಳವಾರ ವೈಭವದ ಮಂಗಳೋತ್ಸವ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನದಲ್ಲಿ, ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವ (125 ವರ್ಷದ) ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ಮಂಗಳವಾರ ವೈಭವದ ಮಂಗಳೋತ್ಸವ ಸಂಪನ್ನಗೊಂಡಿತು.ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರು ದೇವಳಕ್ಕೆ ಭೇಟಿ ನೀಡಿದಾಗ ಅವರನ್ನು ಭವ್ಯವಾಗಿ ಸ್ವಾಗತಿಸಿ, ಗುರುಕಾಣಿಕೆ ಫಲಪುಷ್ಪದೊಂದಿಗೆ ಗೌರವಿಸಲಾಯಿತು.ಬಳಿಕ ಸ್ವಾಮೀಜಿ ಅವರು, ಶ್ರೀ ಲಕ್ಷ್ಮೀ ವೆಂಕಟೇಶ ದೇವರ ಪಡೆದು ಭಜನಾ ಮೊಹೋತ್ಸವದ ಶ್ರೀ ವಿಠೋಬಾ ರುಖುಮಾಯಿ ದೇವರಿಗೆ ಆರತಿ ಬೆಳಗಿಸಿದರು. 125 ದಿನ ಅಹೋರಾತ್ರಿ ನಿರಂತರ ಭಜನಾ ನಡೆಸಿಕೊಟ್ಟ ಸೇವಾದಾರರಿಗೆ, ಪಾಳಿದಾರರಿಗೆ, ಹತ್ತು ಸಮಸ್ತರಿಗೆ ಪ್ರಸಾದ ನೀಡಿ ಅನುಗ್ರಹಿಸಿದರು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಂದೇಶ ನೀಡಿದ ಸ್ವಾಮೀಜಿ, ಶತಮಾನೋತ್ಸವದ ಈ ಶುಭಸಂದರ್ಭದಲ್ಲಿ ಶ್ರೀಗುರುಗಳ ಆರಾಧನೆ, ಶ್ರೀದೇವರ ಮೇಲೆ ಶ್ರದ್ಧೆ, ನಂಬಿಕೆಯಿಂದ ಭಜನೆ ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಯುವಜನತೆ ಸನಾತನ ಸಂಸ್ಕೃತಿಯ ಆರಾಧನೆ ಜೊತೆಗೆ ದೇಶದ ರಕ್ಷಣೆ ಕಾರ್ಯದಲ್ಲಿ ಕೈ ಜೋಡಿಸಬೇಕು, ದೇಶ ಕಾಯುತ್ತಿರುವ ಸೈನಿಕರನ್ನು ಬೆಂಬಲಿಸಬೇಕು ಎಂದರು.

ಸಮಾರಂಭದಲ್ಲಿ ಭಜನಾ ರೂವಾರಿಗಳಾದ ಮಟ್ಟಾರ್ ಸತೀಶ್ ಕಿಣಿ, ಶಾಂತಾರಾಮ ಪೈ, ವಿಶ್ವನಾಥ್ ಭಟ್, ವಸಂತ ಕಿಣೆ, ಗಣೇಶ್ ಕಿಣಿ, ಭಾಸ್ಕರ್ ಶೆಣೈ, ಆಡಳಿತ ಮೊಕ್ತೇಸರ ಪಿ. ವಿ. ಶೆಣೈ ಸ್ವಾಗತಿಸಿದರು, ಚೇ೦ಪಿ ರಾಮಚಂದ್ರ ಭಟ್ ನಿರೂಪಿಸಿದರು. ಆಡಳಿತ ಮಂಡಳಿಯ ಸದಸ್ಯರು, ಜಿ.ಎಸ್.ಬಿ. ಯುವಕ ಮಂಡಳಿ, ಭಗಿನಿ ವೃಂದ, ಜಿ.ಎಸ್.ಬಿ. ಮಹಿಳಾ ಮಂಡಳಿ, ಶತಮಾನೋತ್ತರ ರಜತ ಭಜನಾ ಮಹೋತ್ಸವ ಸಮಿತಿಯ ಸದಸ್ಯರು ಇದ್ದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ