ಶ್ರೀ ಮಂಗಳಾದೇವಿ ಕ್ಷೇತ್ರ: ದಸರಾ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

KannadaprabhaNewsNetwork |  
Published : Oct 12, 2026, 02:45 AM IST
ಶ್ರೀ ಮಂಗಳಾದೇವಿ ಕ್ಷೇತ್ರದಲ್ಲಿ ದಸರಾ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು | Kannada Prabha

ಸಾರಾಂಶ

ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು.

ಮಂಗಳೂರು : ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು.ಕರ್ನಾಟಕ ಬ್ಯಾಂಕಿನ ಚೀಫ್ ಜನರಲ್ ಮ್ಯಾನೇಜರ್ ಲಕ್ಷ್ಮೀನಾರಾಯಣ ಪಿ.ಎಸ್. ಜ್ಯೋತಿ ಬೆಳಗಿಸಿ ವಿದ್ಯುಕ್ತವಾಗಿ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಉತ್ತಮ ಮೌಲ್ಯಧಾರಿತ ಧಾರ್ಮಿಕತೆಯ ವಿಚಾರಧಾರೆಯನ್ನು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ದೇವಳಗಳು ನೀಡುತ್ತಿರುವುದು ಶ್ಲಾಘನೀಯ ಕಾರ್ಯ. ಈ ನಿಟ್ಟಿನಲ್ಲಿ ಮಂಗಳಾದೇವಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಉತ್ಸವದ 12 ದಿನಗಳಲ್ಲಿ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉತ್ತಮ ಮೌಲ್ಯಾಧಾರಿತ ಚಿಂತನೆಯ ಧಾರ್ಮಿಕ ವಿಚಾರಗಳನ್ನು ಭಕ್ತ ಜನರಿಗೆ ನೀಡುತ್ತಿರುವುದು ಅಭಿನಂದನೀಯ ಎಂದರು.

ಕ್ಷೇತ್ರದ ಅನುವಂಶಿಕ ಆಡಳಿತ ಮುಕ್ತೇಸರ ಅರುಣ್ ಐತಾಳ್, ಅನುವಂಶಿಕ ಮುಕ್ತೇಸರರಾದ ಹರೀಶ್ ಐತಾಳ್, ರಘುರಾಮ ಉಪಾಧ್ಯಾಯ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತಿತರರು ಇದ್ದರು.ಮಲ್ಲಿಕಾ ಕಲಾವೃಂದದ ಕಾರ್ಯಾಧ್ಯಕ್ಷ ಸುಧಾಕರ ಪೇಜಾವರ ಪ್ರಸ್ತಾವನೆಗೈದರು. ಮಂಗಳಾದೇವಿ ಕ್ಷೇತ್ರದ ಸಾಂಸ್ಕೃತಿಕ ಕಾರ್ಯಕ್ರಮದ ಸಂಘಟಕ ವಿನಯಾನಂದ ಕಾನಡ್ಕ ನಿರೂಪಿಸಿ, ವಂದಿಸಿದರು. ವಾಸುದೇವರ ಕುಡುಪು ಸಹಕರಿಸಿದರು.

------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಿಲಾಗ್ರಿಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
ಸಿಎಂ ಮಂಗಳೂರು, ಉಡುಪಿ ಪ್ರವಾಸ ರದ್ದು