ಸಮಾನತೆ ತತ್ತ್ವ ಸಾರಿದವರು ಶ್ರೀ ನಾರಾಯಣ ಗುರು

KannadaprabhaNewsNetwork |  
Published : Aug 29, 2026, 01:15 AM IST
28ಎಚ್ಎಸ್ಎನ್11 :  | Kannada Prabha

ಸಾರಾಂಶ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಲಾಭವನದಲ್ಲಿ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಕೃತಿಕಿಂತ ದೊಡ್ಡ ಗುರು ಇಲ್ಲ, ಮನುಷ್ಯರೆಲ್ಲರೂ ಒಂದೇ ಎಂಬ ಸಮಾನತೆಯ ತತ್ವವನ್ನು ಅವರು ಬಲವಾಗಿ ಸಾರಿ, ಜಾತಿ ಹೆಸರಿನಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ವಿರೋಧಿಸಿದರು ಎಂದು ಹೇಳಿದರು. ನಾರಾಯಣ ಗುರುಗಳನ್ನು ಒಂದು ನಿರ್ದಿಷ್ಟ ಜಾತಿಯ ಗುರುವೆಂದು ಭಾವಿಸಲು ಸಾಧ್ಯವಿಲ್ಲ, ಎಲ್ಲಾ ಜಾತಿ ಧರ್ಮವು ಒಂದೇ ಎಂಬ ಮನೋಭಾವ ಹೊಂದಿದ ಮಹಾನ್ ವ್ಯಕ್ತಿ ಅವರಾಗಿದ್ದರು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸಮಾಜದ ಹಿಂದುಳಿದ ವರ್ಗದವರ ಉದ್ಧಾರಕ್ಕಾಗಿ ಶ್ರಮಿಸಿದ ನಾರಾಯಣ ಗುರು ಅವರು ಮೂಢನಂಬಿಕೆಗಳನ್ನು ಬಿಟ್ಟು ಜ್ಞಾನದ ಮಾರ್ಗದಲ್ಲಿ ನಡೆಯಲು ಜನರಿಗೆ ಮಾರ್ಗದರ್ಶ ನೀಡಿದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಚ್.ಎಲ್ ಮಲ್ಲೇಶ್ ಗೌಡ ತಿಳಿಸಿದ್ದಾರೆ.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಲಾಭವನದಲ್ಲಿ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಕೃತಿಕಿಂತ ದೊಡ್ಡ ಗುರು ಇಲ್ಲ, ಮನುಷ್ಯರೆಲ್ಲರೂ ಒಂದೇ ಎಂಬ ಸಮಾನತೆಯ ತತ್ವವನ್ನು ಅವರು ಬಲವಾಗಿ ಸಾರಿ, ಜಾತಿ ಹೆಸರಿನಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ವಿರೋಧಿಸಿದರು ಎಂದು ಹೇಳಿದರು. ನಾರಾಯಣ ಗುರುಗಳನ್ನು ಒಂದು ನಿರ್ದಿಷ್ಟ ಜಾತಿಯ ಗುರುವೆಂದು ಭಾವಿಸಲು ಸಾಧ್ಯವಿಲ್ಲ, ಎಲ್ಲಾ ಜಾತಿ ಧರ್ಮವು ಒಂದೇ ಎಂಬ ಮನೋಭಾವ ಹೊಂದಿದ ಮಹಾನ್ ವ್ಯಕ್ತಿ ಅವರಾಗಿದ್ದರು ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾತಿ, ಧರ್ಮ, ಭೇದಭಾವಗಳನ್ನು ಹೋಗಲಾಡಿಸಲ್ಲೂ ಇಂತಹ ಮಹಾನ್ ವ್ಯಕ್ತಿಗಳ ಪಾತ್ರ ತುಂಬಾ ಮುಖ್ಯವಾಗಿದೆ ಎಂದು ತಿಳಿಸಿದರು. ಜಾತಿ ಪದ್ಧತಿ, ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಗಳನ್ನು ಅವರು ತೀವ್ರವಾಗಿ ವಿರೋಧಿಸಿ ಒಂದೇ ಜಾತಿ, ಒಂದೇ ಮತ ಎಂಬ ಅಮೂಲ್ಯ ಸಂದೇಶವನ್ನು ಸಾರುವ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ್ದಾರೆ, ಜಾತಿ-ಮತಗಳ ಭೇಧವಿಲ್ಲದೆ ನವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸಿಕೊಳ್ಳೊಣ ಎಂದು ಹೇಳಿದರು.

ಹೊಳೆನರಸೀಪುರ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮತ್ತು ಸಾಹಿತಿಗಳಾದ ಎಂ.ಜಿ ಪರಮೇಶ್ ಮಡಬಲು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ನಾರಾಯಣ ಗುರುಗಳ ಆದರ್ಶಗಳು ಎಲ್ಲ ಕಾಲಕ್ಕೂ ಪ್ರಸ್ತುತ, ಅವರ ತತ್ತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು. ಕೇರಳ ರಾಜ್ಯದಲ್ಲಿ ಜಾತಿ, ಮತ ಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರುವೆಂಬ ಸಮಾಜಕ ಸುಧಾರಕರು ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಅವರ ಇಡೀ ಜೀವನವನ್ನು ಮುಡಿಪಾಗಿಟ್ಟರು ಎಂದು ತಿಳಿಸಿದರು.

ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ಸತ್ಯವಾಕ್ಯವನ್ನು ತಂದು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದವರೇ ಶ್ರೀ ನಾರಾಯಣಗುರು ಎಂದು ಹೇಳಿದರು. ಹಿಂದುಳಿದ ವರ್ಗದವರಿಗೆ ದೇಗುಲ ಪ್ರವೇಶ ಎಂಬ ಆಚಾರಣೆಯನ್ನು ಒಗಲಾಡಿಸಿ ಸ್ವಂತ ದೇವಸ್ಥಾನಗಳನ್ನು ಪ್ರತಿಷ್ಠಾಪಿಸಿ ಎಲ್ಲರಿಗೂ ಪೂಜೆಯ ಹಕ್ಕನ್ನು ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಚ್. ಪಿ ತಾರಾನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕೋಶ ಅಧ್ಯಕ್ಷರಾದ ಹೇಮಂತ್ ಕೆ. ಆರ್‌ ಹಾಗೂ ಮತ್ತಿತರರು ಉಪಸ್ಥಿತಿದ್ದರು.

==

ಫೋಟೋ: ಕಲಾಭವನದಲ್ಲಿ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ಳಂಬೆಳಗ್ಗೆ ಮದ್ದೂರು ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ
ಬೀದಿ ಬದಿ ಅಂಗಡಿಗಳಲ್ಲಿ ಆಹಾರ ಪರಿಶೀಲಿಸಿದ ಉಪಲೋಕಾಯುಕ್ತರು