
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬಕ್ರೀದ್ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗೋವುಗಳ ಅಕ್ರಮ ಸಾಗಾಟ, ಅನಧಿಕೃತ ಚಟುವಟಿಕೆ, ಕಾನೂನು ಬಾಹಿರ ಗೋ ಹತ್ಯೆ ಹೆಚ್ಚುವ ಸಾಧ್ಯತೆಯಿದೆ. ಹೀಗಾಗಿ ಜಾನುವಾರುಗಳ ಸಂರಕ್ಷಣೆ ಹಾಗೂ ಹತ್ಯೆ ನಿಷೇಧಿಸಲು ಕ್ರಮ ಕೈ ಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣ ಕಾಯ್ದೆ ಅನ್ವಯ ಗೋಹಕ್ಕೆ ಗೋವುಗಳ ಅಕ್ರಮ ಸಾಗಾಟ, ಅನಧಿಕೃತ ವಧೆ, ಶಿಕ್ಷಾರ್ಹ ಗಂಭೀರ ಅಪರಾಧಗಳಾಗಿವೆ. ಆದರೂ ಹಬ್ಬಗಳ ಸಂದರ್ಭದಲ್ಲಿ ಅಕ್ರಮ ಜಾಲಗಳು ರಾತ್ರಿ ವೇಳೆ ಗೋವುಗಳ ಸಾಗಟ ಮಾಡುವುದು. ಜನವಸತಿ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ವಧೆ ಮಾಡುವ ಪ್ರಕರಣಗಳು ಆತಂಕ ಕಾರಿಯಾಗಿವೆ ಎಂದು ಮಾನವಿಯಲ್ಲಿ ತಿಳಿಸಲಾಗಿದೆ.ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳು, ಗಡಿ ಭಾಗಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ದಿನದ 24 ಗಂಟೆಯೂ ವಿಶೇಷ ತಪಾಸಣೆ ವ್ಯವಸ್ಥೆ ಕಲ್ಪಿಸಬೇಕು. ಗೋವು ಸಾಗಣೆ ವಾಹನಗಳ ದಾಖಲೆ, ಪರವಾನಗಿ, ಪಶು ವೈದ್ಯಕೀಯ ಪ್ರಮಾಣ ಪತ್ರ, ಸಾಕಣಿಕೆ ಕಾನೂನನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಇದಲ್ಲದೆ ಅನಧಿಕೃತ ಕಸಾಯಿಖಾನೆಗಳ ಮೇಲೆ ವಿಶೇಷ ದಾಳಿ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳ ಬೇಕು. ಸಾರ್ವಜನಿಕ ಅಶಾಂತಿ ಕಾನೂನು ಸುವ್ಯವಸ್ಥೆ ಬಂದ ಹಾಗೂ ಸಂವಿಧಾನದ ನಿರ್ದೇಶಕ ತತ್ವಗಳ ಉಲ್ಲಂಘನೆ ಆಗಲಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷವೇ ನೇರ ಹೊಣೆ ಎಂದು ತಿಳಿಸಲಾಗಿದೆ.