ಶನಿವಾರಸಂತೆ ಶ್ರದ್ಧಾಭಕ್ತಿಯ ಶ್ರೀರಾಮನವಮಿ

KannadaprabhaNewsNetwork |  
Published : Mar 30, 2026, 02:15 AM IST
ಪೋಟೋ:- 1. ಶ್ರೀರಾಮನವಮಿ ಪ್ರಯಕ್ತ ರಾಮ ಮಂದಿರದಲ್ಲಿ ಶ್ರೀರಾಮ, ಸೀತಾಲಕ್ಷ್ಮಿ ದೇವರ ಮೂರ್ತಿಯನ್ನು ಅಲಂಕರಿಸಿರುವುದು. 2.ಭಕ್ತಾಧಿಗಳಿಂದ ದೇವರ ದರ್ಶನ | Kannada Prabha

ಸಾರಾಂಶ

ಇಲ್ಲಿನ ಶ್ರೀ ರಾಮ ಮಂದಿರದಲ್ಲಿ ಶುಕ್ರವಾರ ಶ್ರೀರಾಮನವಮಿ ಮಹೋತ್ಸವವನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ದೇವಸ್ಥಾನ ಸಮಿತಿಯಿಂದ ಸಮಿತಿಯಿಂದ ಶ್ರೀರಾಮನವಮಿ ಪ್ರಯುಕ್ತವಾಗಿ ಯುಗಾದಿ ಹಬ್ಬದ ದಿನದಿಂದ ಶ್ರೀ ರಾಮ ಮಂದಿರದಲ್ಲಿ ಪ್ರತಿದಿನ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಇಲ್ಲಿನ ಶ್ರೀ ರಾಮ ಮಂದಿರದಲ್ಲಿ ಶುಕ್ರವಾರ ಶ್ರೀರಾಮನವಮಿ ಮಹೋತ್ಸವವನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ದೇವಸ್ಥಾನ ಸಮಿತಿಯಿಂದ ಸಮಿತಿಯಿಂದ ಶ್ರೀರಾಮನವಮಿ ಪ್ರಯುಕ್ತವಾಗಿ ಯುಗಾದಿ ಹಬ್ಬದ ದಿನದಿಂದ ಶ್ರೀ ರಾಮ ಮಂದಿರದಲ್ಲಿ ಪ್ರತಿದಿನ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು. ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶ್ರೀರಾಮನವಮಿ ಪ್ರಯುಕ್ತ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ, ಹೋಮ ಮುಂತಾದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬೆಳಗ್ಗೆ 8 ಗಂಟೆಗೆ ದೇವರಿಗೆ ಫಲಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ನೆರವೇರಿಸಿದ ಬಳಿಕ ದೇವರಿಗೆ ವಿಷ್ಣುಸಹಸ್ರನಾಮ, ರಾಮತಾರಕ ಹೋಮ, ಪೂರ್ಣಾಹುತಿ ಮುಂತಾದ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಅರ್ಚಕರಾದ ಶೇಷಾಚಲ, ಮಾಲತೇಶ್ ಭಟ್, ಸುಹಾಸ್ ಭಟ್ ಪೂಜಾ ವಿಧಿ ವಿಧಾನ ನೆರವೇರಿಸಿದರು. ಮಧ್ಯಾಹ್ನ 12-30 ರಿಂದ ಭಕ್ತಾದಿಗಳು ಶ್ರೀ ರಾಮ ದೇವರ ದರ್ಶನ ಪಡೆದರು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು ಮತ್ತು ಪಾನಕ ವಿತರಿಸಲಾಯಿತು. 4 ಗಂಟೆಗೆ ಶ್ರೀ ಸೀತಾಲಕ್ಷ್ಮಣ ಆಂಜನೇಯ ಸಹಿತ ಶ್ರೀ ರಾಮ ದೇವರ ಉತ್ಸವ ಮೂರ್ತಿಗಳನ್ನು ಅಡ್ಡ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು. ಸಂಜೆ 7-30 ಕ್ಕೆ ಮಾಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದೊಂದಿಗೆ ಶ್ರೀರಾಮನವಮಿ ಪೂಜಾ ಮಹೋತ್ಸವ ಸಂಪನ್ನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂಜಿಬೆಟ್ಟು ರುಕ್ಮಿಣಿ ಸತ್ಯಭಾಮಾ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ
ಮುಂದಿನ ತಲೆಮಾರಿಗೂ ನಾಗರಿಕ ಸಂಸ್ಕೃತಿ ಪರಿಚಯ: ಉದಯ ಗಾಂವ್ಕರ್‌