ತರೀಕೆರೆಯಲ್ಲಿ ಶ್ರದ್ಧಾಭಕ್ತಿಯಿಂದ ಶ್ರೀ ಶಂಕರರ ಜಯಂತಿ

KannadaprabhaNewsNetwork |  
Published : Apr 22, 2026, 01:15 AM IST
ತರೀಕೆರೆಯಲ್ಲಿ ಶ್ರದ್ದಾಭಕ್ತಿಯಿಂದ ಏರ್ಪಾಡಾಗಿದ್ದ ಶ್ರೀ ಶಂಕರ ಜಯಂತಿ ಕಾರ್ಯಕ್ರಮ | Kannada Prabha

ಸಾರಾಂಶ

ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪಟ್ಟಣದ ಶ್ರೀಮಜ್ಜಗದ್ಗುರು ಶ್ರೀ ಅದಿಶಂಕರಾಚಾರ್ಯ ವೃತ್ತದಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ಶ್ರೀ ಶಂಕರ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ತರೀಕೆರೆ

ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪಟ್ಟಣದ ಶ್ರೀಮಜ್ಜಗದ್ಗುರು ಶ್ರೀ ಅದಿಶಂಕರಾಚಾರ್ಯ ವೃತ್ತದಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ಶ್ರೀ ಶಂಕರ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಬೆಳಗ್ಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಭಜನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವಿಶೇಷ ಅಲಂಕಾರದ ನಂತರ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿತ್ತು.

ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷರು ಆರ್.ಎನ್.ಶ್ರೀಧರ್, ಉಪಾಧ್ಯಕ್ಷರು ಡಿ.ವಿ.ಕೃಷ್ಣಮೂರ್ತಿ, ಕಾರ್ಯದರ್ಶಿ ಡಿ.ಸಿ.ಶ್ರೀನಿವಾಸಮೂರ್ತಿ, ಖಚಾಂಚಿ ಡಿ.ಜಿ.ಸಚಿನ್, ನಿರ್ದೇಶಕರಾದ ರವಿಕುಮಾರ್, ವೇ.ಬ್ರ.ಶ್ರೀ ಡಾ. ಬಿ.ಎಚ್.ಕುಮಾರಸ್ವಾಮಿ, ಸಮಿತಿ ಪದಾದಿಕಾರಿಗಳು, ಸದಸ್ಯರು, ಶ್ರೀ ಸ್ಕಂದ ಮಾತಾ ವಿಪ್ರ ಮಹಿಳಾ ಸಂಘದ ಸದಸ್ಯರು, ಶ್ರೀ ಶಂಕರ ಪ್ರಜ್ಞಾ ವೇದಿಕೆ ಪದಾಧಿಕಾರಿಗಳು, ಸದಸ್ಯರು, ವಿಪ್ರ ವಿದ್ಯಾರ್ಥಿ ವೇದಿಕೆ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀಮಜ್ಜಗದ್ಗುರು ಶ್ರೀ ಅದಿಶಂಕರಾಚಾರ್ಯರ ಪುತ್ಥಳಿಗೆ ಅರ್ಚಕರಾದ ಶಶಿಧರ್ ಭಟ್ ಮತ್ತು ತಂಡದವರು ವಿಶೇಷ ಹೂವಿನ ಅಲಂಕಾರವನ್ನು ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಲಿತ, ಶೋಷಿತರ ಆಶಾ ಕಿರಣ ಅಂಬೇಡ್ಕರ್
ಕರ್ಮ ಸಿದ್ದಾಂತ ಒಡೆದು ಕಾಯಕ ಸಂಸ್ಕೃತಿ ತಂದ ಬಸವೇಶ್ವರ - ಡಾ.ಕೋಡಿರಂಗಪ್ಪ