ನಂತೂರು ಭಾರತೀ ಸಮೂಹ ಸಂಸ್ಥೆಯಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

KannadaprabhaNewsNetwork |  
Published : May 06, 2025, 12:18 AM IST
32 | Kannada Prabha

ಸಾರಾಂಶ

ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹವ್ಯಕ ಮಂಡಲ ಮಂಗಳೂರು ಸಹಕಾರದಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಶುಕ್ರವಾರ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಂಗಳೂರುದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹವ್ಯಕ ಮಂಡಲ ಮಂಗಳೂರು ಸಹಕಾರದಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಶುಕ್ರವಾರ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಸಂಪನ್ನಗೊಂಡಿತು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿ, ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಶ್ರೀ ಶಂಕರ ಭಗವತ್ಪಾದರು ಸನಾತನ ಸಂಸ್ಕೃತಿ ಉಳಿಸಿ, ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತವಾದ ಅದ್ವೈತ ತತ್ವ ಪ್ರತಿಪಾದಿಸಿದರು. ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು ಎಂದು ಹೇಳಿದರು.ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ ಭಟ್ ಹೊಸಮನೆ ಉಪನ್ಯಾಸ ನೀಡಿ, ಶ್ರೀ ಶಂಕರರು ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು. ಆದಿಶಂಕರರು ಭಗವದ್ಗೀತೆ, ಉಪನಿಷತ್ ಹಾಗೂ ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು ಎಂದು ಹೇಳಿದರು.ಶ್ರೀ ಭಾರತೀ ಸಮೂಹ ಸಂಸ್ಥೆಯ ಸಂಯೋಜಕಿ ಜಯಂತಿ, ಶ್ರೀ ಭಾರತೀ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸಂದೀಪ್ ಆಚಾರ್ಯ, ಶಂಕರಶ್ರೀ ವಸಂತ ವೇದಪಾಠಶಾಲೆ ಅಧ್ಯಾಪಕ ವೇ.ಮೂ.ಅಮೈ ಶಿವಪ್ರಸಾದ್ ಭಟ್ ಮತ್ತಿತರರು ಇದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ‌ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!