ಕನ್ನಡಪ್ರಭ ವಾರ್ತೆ ಮಂಡ್ಯ
ದೇವಾಲಯದ ಅರ್ಚಕ ಪಾರ್ಶ್ವನಾಥ ಇಂದ್ರ ಮಾತನಾಡಿ, ಎಂಟು ದಿನಗಳ ಕಾಲ ನಡೆಯುವ ಸಿದ್ಧಚಕ್ರ ಆರಾಧನಾ ಮಹೋತ್ಸವವನ್ನು ಹಿಂದೆ ಜೈನ ಮುನಿಗಳು ಪ್ರಾರಂಭಿಸಿದರು. ಅಂದಿನಿಂದ ಇಂದಿನವರೆಗೂ ಇದನ್ನು ನಡೆಸಿಕೊಂಡು ಬರುತ್ತಿದ್ದೇವೆ ಎಂದರು.
ಆಷಾಢ ಮಾಸದ ಅಷ್ಟಮಿವರೆಗೆ ೮ ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಾವೀರರು ಸಿದ್ಧಿಯನ್ನು ಪಡೆದು ಸಿದ್ಧರಾದ ಕಾರಣ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತದೆ. ಈ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಪಾಪಮುಕ್ತರಾಗುವರು ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಜೈನ ಸಮುದಾಯದ ಎಲ್ಲರೂ ಮಂಗಳ ಕಾರ್ಯದಲ್ಲಿ ಪಾಲ್ಗೊಂಡು ಪೂಜಾ ಕಾರ್ಯದಲ್ಲಿ ತೊಡಗುತ್ತಾರೆ ಎಂದರು.ಈ ಮಂಗಳ ಕಾರ್ಯಕ್ರಮದಲ್ಲಿ ಅನಂತನಾಥ ದೇವಾಲಯ ಸಮಿತಿ, ಮಹಿಳಾ ಸಂಘ, ಜ್ವಾಲಾಮಾಲಿನಿ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಸೇರಿ ಈ ಮಹೋತ್ಸವವನ್ನು ನಡೆಸುತ್ತಿದ್ದು, ನಿತ್ಯವೂ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ನಾಳೆ ಹಡಪದ ಅಪ್ಪಣ್ಣ ಜಯಂತಿ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಜು. ೧೦ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಮಂಡ್ಯ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಬಿ.ಕೆಂಪರಾಜು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಪಿಇಎಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ.ಎಂ.ಎಸ್.ಅನಿತಾ ಉಪನ್ಯಾಸ ನೀಡುವರು ಎಂದು ವಿವರಿಸಿದರು.