ಪಾಲಿಕೆ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಅಮಾನತು

KannadaprabhaNewsNetwork |  
Published : May 17, 2024, 01:31 AM ISTUpdated : May 17, 2024, 07:28 AM IST
ಬಿಬಿಎಂಪಿ | Kannada Prabha

ಸಾರಾಂಶ

ಬಿಬಿಎಂಪಿಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಶ್ರೀಧರ್‌ ಮೂರ್ತಿ (ಕೆಎಎಸ್‌) ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

 ಬೆಂಗಳೂರು :  ಹೆಬ್ಬಾಳ ಮೇಲ್ಸೇತುವೆ ಬಳಿ ಜಾಹೀರಾತು ಅಳವಡಿಕೆ ಮಾಡಿದ ಅವಿನಾಶಿ ಆಡ್ಸ್‌ ಸಂಸ್ಥೆಯು ಬಿಬಿಎಂಪಿ ವಿರುದ್ಧ ಹೈಕೋರ್ಟ್‌ನಲ್ಲಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡದೇ ಕರ್ತವ್ಯ ಲೋಪ ಎಸಗಿದ ಪರಿಣಾಮ ಬಿಬಿಎಂಪಿಗೆ ₹16.27 ಕೋಟಿ ನಷ್ಟದ ಜತೆಗೆ, ಪರೋಕ್ಷವಾಗಿ ಅವಿನಾಶಿ ಆಡ್ಸ್‌ ಸಂಸ್ಥೆಗೆ ಸಹಕಾರ ನೀಡಿದ ಆರೋಪವಿತ್ತು.

ಈ ಹಿನ್ನೆಲೆಯಲ್ಲಿ ಶ್ರೀಧರ್‌ ಮೂರ್ತಿ ಅವರನ್ನು ಇಲಾಖೆ ವಿಚಾರಣೆಗೆ ಒಳಪಡಿಸಿ ಅಮಾನತುಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದರು.

ಅದರಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಉಮಾ ದೇವಿ ಆದೇಶಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಚೂರು: ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ನಡೆದ ಬರ ಅಧ್ಯಯನ!
ನಕಲಿ ಡ್ರಗ್ಸ್‌ ದಂಧೆಯ ಕಿಂಗ್‌ಪಿನ್‌ ಪ್ರಶಾಂತ್‌ ಟರ್ಕಿ ರಹಸ್ಯ ಬಯಲು