ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ರಾಮದುರ್ಗ ತಾಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯವರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಢವಣ ಅವರೇ ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಹೆಚ್ಚಿನ ಬಹುಮತದಿಂದ ಆರಿಸಿ ತರುವಂತೆ ಮತದಾರರಿಗೆ ಅವರು ಮನವಿ ಮಾಡಿದರು.
ಬಿಡಿಸಿಸಿ ಬ್ಯಾಂಕಿನ ಚುನಾವಣಾ ಪ್ರಚಾರಕ್ಕೂ ಮುನ್ನ ಅಂದರೆ ಎರಡು ತಿಂಗಳ ಹಿಂದೆಯೇ ರಾಮದುರ್ಗ ತಾಲೂಕಿನ ಅಭ್ಯರ್ಥಿ ಆಯ್ಕೆ ಮಾಡುವುದರ ಸಂಬಂಧ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸೇರಿದಂತೆ ಅನೇಕ ಗಣ್ಯರ ಅಭಿಪ್ರಾಯ ಕೇಳಲಾಗಿತ್ತು. ಸುಮಾರು ಮೂರು ಬಾರಿ ನಿಯೋಜಿತ ಸಭೆಯನ್ನು ಮುಂದೂಡಲಾಗಿತ್ತು. ಪ್ರತಿ ಸಂದರ್ಭದಲ್ಲೂ ಯಾದವಾಡ ಸಹೋದರರು ಬ್ಯಾಂಕಿನ ಚುನಾವಣೆ ಸಂಬಂಧ ತಮ್ಮ ಗುಟ್ಟನ್ನು ಬಿಟ್ಟುಕೊಡಲಿಲ್ಲ ಎಂದರು.ಅನೇಕ ಬಾರಿ ಮಹಾದೇವಪ್ಪ ಯಾದವಾಡ ಮತ್ತು ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಅವರನ್ನು ಸಂಪರ್ಕಿಸಿದರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಸ್ಪಷ್ಟ ನಿರ್ಧಾರ ಹೇಳಲಿಲ್ಲ. ನೀವು ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧವೆಂದು ನಂತರ ನಡೆದ ಸಭೆಯಲ್ಲಿ ಹೇಳಿದರು. ಈ ಸಂಬಂಧ ಬೆಳಗಾವಿ, ರಾಮದುರ್ಗ ಮತ್ತು ಮೂಡಲಗಿ ಭೇಟಿಯ ಸಂದರ್ಭದಲ್ಲಿ ಮಲ್ಲಣ್ಣ ಯಾದವಾಡ ಅವರು ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದನ್ನು ಹೇಳಲಿಲ್ಲ ಎಂದು ಹೇಳಿದರು.
ಮಲ್ಲಣ್ಣ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಯಾರಿಗೂ ತಿಳಿಸದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ನಮ್ಮ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಢವಣ ಅವರೇ ಅಧಿಕೃತ ಅಭ್ಯರ್ಥಿಯಾಗಿದ್ದು, ಈ ಸಂಬಂಧ ಯಾದವಾಡ ಸಹೋದರರೊಂದಿಗೆ ಮಾತುಕತೆಗೆ ಸಿದ್ಧ ಇರುವುದಾಗಿ ಅವರು ಸ್ಪಷ್ಟಪಡಿಸಿದರು.
ಇಂದಿನ ಸಭೆಯಲ್ಲಿ ರಾಮದುರ್ಗ ತಾಲೂಕಿನ 36 ಪಿಕೆಪಿಎಸ್‌ಗಳ ಪೈಕಿ ಸುಮಾರು 29 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಕೂಡಿಕೊಂಡು ಶ್ರೀಕಾಂತ ಢವಣ ಅವರನ್ನು ಅಭ್ಯರ್ಥಿಯನ್ನಾಗಿ ಒಕ್ಕೂರಲಿನಿಂದ ಹೇಳಿದ್ದರಿಂದ ಢವಣ ಅವರ ಹೆಸರನ್ನು ಅಂತಿಮ ಮಾಡಲಾಗಿದೆಂದು ಬಾಲಚಂದ್ರ ಜಾರಕಿಹೊಳಿ, ಶಾಸಕ ಮತ್ತು ಬೆಮುಲ್ ಅಧ್ಯಕ್ಷ