ಕನ್ನಡ ಸಾಹಿತ್ಯಕ್ಕೆ ಶ್ರೀಕೃಷ್ಣದೇವರಾಯರ ಕೊಡುಗೆ ಅಪಾರ

KannadaprabhaNewsNetwork | Published : Nov 7, 2024 11:45 PM

ಸಾರಾಂಶ

ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 6ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ದೇವರಾಯರ ಕುರಿತು ಪ್ರಾಂಶುಪಾಲ ರಂಗಸ್ವಾಮಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಶ್ರೀಕೃಷ್ಣ ದೇವರಾಯರು ಕನ್ನಡ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸಿದ್ದಾರ್ಥ ಪ್ರಥಮ ಕಾಲೇಜಿನ ಪ್ರಾಂಶುಪಾಲ ರಂಗಸ್ವಾಮಿ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ, ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 50 ದಿನಗಳವರೆಗೆ ಆಯೋಜಿಸಿರುವ ಕನ್ನಡ ರಾಜ್ಯೋತ್ಸವದ 6ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ದೇವರಾಯರ ಕುರಿತು ಮಾತನಾಡಿದರು.ಶ್ರೀ ಕೃಷ್ಣದೇವರಾಯನು ವಿಜಯನಗರ ಸಾಮ್ರಾಜ್ಯದ ಪ್ರಸಿದ್ಧ ರಾಜರಾಗಿದ್ದರು. ಹಂಪೆಯು ಇವರ ರಾಜಧಾನಿಯಾಗಿತ್ತು. ಕ್ರಿ.ಶ.೧೫೦೯ ರಿಂದ ೧೫೨೯ ರವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖರಾಗಿದ್ದರು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉತ್ತುಂಗಕ್ಕೇರಿತು. ಕನ್ನಡ ನಾಡಿನಲ್ಲಿ "ಮೂರುರಾಯರಗಂಡ ", "ಕನ್ನಡರಾಜ್ಯ ರಮಾರಮಣ " ಎಂದೂ, ಆಂಧ್ರದಲ್ಲಿ "ಆಂಧ್ರಭೋಜ " ಎಂದು ಬಿರುದಾಂಕಿತನಾಗಿದ್ದರು. ವಿಜಯನಗರ ಸಾಮ್ರಾಜ್ಯದ ಕಾಲದ ವೈಭವ ಇಂದೂ ಮನೆಮಾತಾಗಿದ್ದು, ಅವರ ಆಡಳಿತದ ಅವಧಿಯಲ್ಲಿ ಕನ್ನಡ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅಪಾರ ಕನ್ನಡ ಅಭಿಮಾನ ಹೊಂದಿದ್ದರು. ಅಗ್ರಗಣ್ಯ ಸ್ಥಾನವನ್ನು ಪಡೆದಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ಹೆಚ್ಚು ಆದ್ಯತೆ ನೀಡುವ ಅಂದಿನ ಕನಸು ನನಸಾಗಿಸಿದ್ದಾರೆ.ಕನ್ನಡ ಕಟ್ಟಾಳು ವಾಟಾಳ್ ನಾಗರಾಜ್ ಅವರು ಕನ್ನಡಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಸೋಲು ಒಂದು ದೊಡ್ಡ ದುರಂತವಾಗಿದೆ. ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ನಗರಸಭಾ ಮಾಜಿ ಸದಸ್ಯ ಪದ್ಮಪುರುಷೋತ್ತಮ್, ಎಪಿಎಂಸಿ ನಿರ್ದೇಶಕ ವೆಂಕಟರಾವ್ ಸಾಠೆ, ಶಾ.ಮುರಳಿ, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಶಿವಲಿಂಗಮೂರ್ತಿ, ನಂಜುಂಡಶೆಟ್ಟಿ, ತಮಿಳು ಸಂಘದ ಜಗದೀಶ್, ಆಟೋ ಲಿಂಗರಾಜು, ರಾಚಪ್ಪ, ಚನ್ನಶೆಟ್ಟಿ ಹಾಜರಿದ್ದರು.

Share this article