- ಶಾಸಕ, ಸರ್ಕಾರದ ವೈಫಲ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ.
ಕನ್ನಡಪ್ರಭ ವಾರ್ತೆ, ಶೃಂಗೇರಿಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನೆಡೆ, ಶಾಸಕರ ವಿಫಲ, ರಸ್ತೆ ಹೊಂಡಗುಂಡಿಗಳು, ಆಡಳಿತ ವೈಫಲ್ಯ ವಿರೋಧಿಸಿ ಜಿಜೆಪಿ ಕಾರ್ಯಕರ್ತರು ಸೋಮವಾರ ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ಗ್ರಾಮಪಂಚಾಯಿತಿ ಕಚೇರಿ ಎದುರು ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ತಲಗಾರು ಉಮೇಶ್ ಶೃಂಗೇರಿ ಕ್ಷೇತ್ರದಲ್ಲಿ ಕಳೆದ 2 ವರ್ಷ ಗಳಿಂದ ಅಭಿವೃದ್ಧಿಯೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಸರ್ಕಾರ ಇದೆಯೇ, ಆಡಳಿತ ನಡೆಯುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಕ್ಷೇತ್ರದಲ್ಲಿ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ. ಭ್ರಷ್ಟಾಚಾರ, ಹಗರಣಗಳೇ ಸರ್ಕಾರದ ಸಾಧನೆ ಗಳಾಗಿವೆ. ಆಡಳಿತ ಪಕ್ಷದ ಶಾಸಕರೇ ತಮ್ಮದೇ ಸರ್ಕಾರದ ವಿರುದ್ಧ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿಲ್ಲ. ಅನುದಾನವಿಲ್ಲ ಎಂದೆಲ್ಲ ಆರೋಪ ಮಾಡುತ್ತಿದ್ದಾರೆ.ಶೃಂಗೇರಿ ತಾಲೂಕಿನಲ್ಲಿಯೂ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸಮಸ್ಯೆಗಳಿಗೆ ಶಾಸಕರು ಸ್ಪಂದಿಸುತ್ತಿಲ್ಲ. ತಾಲೂಕಿನೆಲ್ಲೆಡೆ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆ ಶಾಸಕರ ಬೆಂಬಲವೂ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಿಂತ ಹೊಂಡಗುಂಡಿಗಳೇ ಜಾಸ್ತಿಯಾಗಿದೆ. ಗ್ರಾಪಂ ಮೂಲಕ ಆಗುವ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಕ್ಷೇತ್ರಕ್ಕೆ, ಪಂಚಾಯಿತಿಗಳಿಗೆ ಅನುದಾನವಿಲ್ಲ. ನೆರೆ ಪರಿಹಾರ, ರೈತರಿಗೆ ಪರಿಹಾರ, ಯಾವುದೇ ರೀತಿ ಪರಿಹಾರವಾಗಲೀ ಏನು ಇಲ್ಲ. ರಾಜ್ಯದ ಅಭಿವೃದ್ಧಿ ಶೂನ್ಯ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಅಭಿವೃದ್ದಿ ನಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ಎಸ್ ಸಿ ಮೋರ್ಚಾದ ವಕ್ತಾರ ಬಿ.ಶಿವಶಂಕರ್, ತಾಲೂಕು ಕಾರ್ಯದರ್ಶಿ ವೇಣುಗೋಪಾಲ್, ನೂತನ್ ಕುಮಾರ್, ಕಿಗ್ಗಾ ಶಕ್ತಿ ಕೇಂದ್ರದ ಚಿನ್ನಪ್ಪ, ವಿಜಯ್, ಮಾಜಿ ತಾಪಂ ಅಧ್ಯಕ್ಷೆ ಜಯಶೀಲ, ಸುದೀಂದ್ರ, ಗಿರೀಶ್ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು. ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.7 ಶ್ರೀ ಚಿತ್ರ 2-
ಶೃಂಗೇರಿ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ಗ್ರಾಮಪಂಚಾಯಿತಿ ಕಚೇರಿ ಬಿಜೆಪಿ ಕಾರ್ಯಕರ್ತರು ರಸ್ತೆ ಗುಂಡಿಗೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.