ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿ

KannadaprabhaNewsNetwork |  
Published : Oct 31, 2026, 01:15 AM IST
61 | Kannada Prabha

ಸಾರಾಂಶ

ಯಾವುದೆ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು

ಕನ್ನಡಪ್ರಭ ವಾರ್ತೆ ಕೆ.ಆರ್. ನಗರಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಿ ಸಹಕಾರ ನೀಡಿದಲ್ಲಿ ಸರ್ಕಾರಿ ಶಾಲೆಗಳು ಉಳಿದು ಬೆಳೆಯಲು ಸಾಧ್ಯ ಎಂದು ಕುಪ್ಪಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಕೆ.ಪಿ. ಪ್ರಕಾಶ್ ಹೇಳಿದರು.ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಶ್ರೀನಿವಾಸ ಭಟ್ ಮತ್ತು ಪ್ರದೀಪ್‌ ಕುಮಾರ್ ಶಾಲೆಗೆ ಕೊಡುಗೆಯಾಗಿ ನೀಡಿದ ಸುಮಾರು 7 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಗ್ರೈಂಡರ್‌ ನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.ಯಾವುದೆ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು ನುರಿತ, ಶಿಕ್ಷಕರು, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಶಾಲೆಯಲ್ಲಿ ಉತ್ತಮ ವಾತಾವರಣವಿದೆ ಎಂದರು.ಸರ್ಕಾರಿ ಶಾಲೆಗಳ ಬಗ್ಗೆ ಒಲವು ತೋರಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವುದಲ್ಲದೆ, ಸಾರ್ವಜನಿಕರು ಸರ್ಕಾರಿ ಶಾಲೆಯ ಅಭಿವೃದ್ದಿಗೆ ತಮ್ಮ ಕೈಲಾದ ಕೊಡುಗೆಯನ್ನು ನೀಡಿ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಕೈಜೋಡಿಸಬೇಕೆಂದರು. ಶಾಲೆಯ ಮುಖ್ಯಶಿಕ್ಷಕ ಎಚ್.ಕೆ. ಪ್ರಕಾಶ್ ದಾನಿಗಳಿಂದ ಕೊಡುಗೆಯನ್ನು ಪಡೆದು ಮಾತನಾಡಿ, ಜನತೆ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆ ನೀಡುವುದರ ಜತೆಗೆ ಮಕ್ಕಳನ್ನು ನಮ್ಮ ಶಾಲೆಗಳಿಗೆ ದಾಖಲು ಮಾಡಲು ಮುಂದೆಬರಬೇಕೆಂದರು. ಸರ್ಕಾರಿ ಶಾಲೆಗಳಲ್ಲಿ ಹತ್ತು ಹಲವಾರು ಸರ್ಕಾರದ ಯೋಜನೆಗಳೊಂದಿಗೆ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ದೊರೆಯವುದರಿಂದ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದರು.ದಾನಿಗಳಾದ ಹಳೆ ವಿದ್ಯಾರ್ಥಿಗಳಾದ ಶ್ರೀನಿವಾಭಟ್, ಪ್ರದೀಪ್‌ಕುಮಾರ್ ಮಾತನಾಡಿದರು. ಸಹಶಿಕ್ಷಕ ರಾಜೇಗೌಡ, ಹೇಮಂತ್‌ಕುಮಾರ್, ಪಲ್ಲವಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸಿಂಧೂ, ಸದಸ್ಯ ಗೋವಿಂದೇಗೌಡ, ಶಿವಪ್ಪ, ನಾಗೇಶ್‌ರಾವ್, ಧರ್ಮರಾಜ್ ಮತ್ತಿತರರು ಹಾಗೂ ಪೋಷಕವರ್ಗದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ