ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮಸಂಗಮಕ್ಕೆ ಚಪ್ಪರ ಮೂಹೂರ್ತ

KannadaprabhaNewsNetwork | Published : Dec 17, 2024 1:00 AM

ಸಾರಾಂಶ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 28, 29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹೂರ್ತ ಸಮಾರಂಭ ಸೋಮವಾರ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಕನ್ನಡಪ್ರಭವಾರ್ತೆ ಪುತ್ತೂರು

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 28, 29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹೂರ್ತ ಸಮಾರಂಭ ಸೋಮವಾರ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.ದೇವಳದ ನಡೆಯಲ್ಲಿ ಪ್ರಾರ್ಥನೆಯ ನಂತರ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಜಯರಾಮ್ ಭಟ್ ಚಪ್ಪರ ಮೂಹೂರ್ತದ ಧಾರ್ಮಿಕ ವಿಧಿವಿಧಾನ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಪುಷ್ಪಾರ್ಚನೆ ನಡೆಸಿ ಮಾತನಾಡಿ ಧರ್ಮಸಂಗಮ ಕಾರ್ಯಕ್ರಮದ ಮೂಲಕ ಎರಡು ಜಿಲ್ಲೆಯ ಸ್ವಾಮೀಜಿಗಳ ಕೂಡುವಿಕೆ ನಡೆಯಲಿದೆ. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಮಾಜದಲ್ಲಿ ಉದ್ಯೋಗ, ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಸೇವೆಯ ಮೂಲಕ ಮನೆಮಾತಾಗಿದೆ. ದಿನದ 24 ಗಂಟೆಯೂ ಹಿಂದೂಗಳ ಸೇವೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸನ್ನದ್ಧವಾಗಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಸ್ವಾಗತ ಸಮಿತಿ ಸಂಚಾಲಕರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಉದ್ಯಮಿ ಜೆ.ಕೆ ನಾಯರ್, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಗಣೇಶ್ ಮಕರಂದ, ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ, ವಕೀಲರಾದ ಚಿನ್ಮಯ್ ರೈ ಈಶ್ವರಮಂಗಲ, ಬಾಲಚಂದ್ರ ಸೊರಕೆ, ಗಿರೀಶ್ ಕುಮಾರ್, ಸುನೀಲ್ ಬೊರ್ಕರ್, ಸುಜಿತ್ ಕಜೆ, ಪ್ರಜ್ವಲ್ ಘಾಟೆ, ಪ್ರವೀಣ್ ನಾಯ್ಕ್ ಪಾಂಗಾಳಾಯಿ, ಮನೀಶ್ ಕುಲಾಲ್, ನಿತೀಶ್ ರೈ ತಿಂಗಳಾಡಿ, ಗಣೇಶ್ ಬೆದ್ರಾಳ ಮತ್ತಿತರರು ಉಪಸ್ಥಿತರಿದ್ದರು. ಸಮಿತಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Share this article