25ರಂದು ಶ್ರೀನಿವಾಸ ಕಲ್ಯಾಣೋತ್ಸವ

KannadaprabhaNewsNetwork |  
Published : Dec 21, 2025, 02:15 AM IST
ಪಟ್ಟಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವೈಭವವಾಗಿ ಶ್ರೀನಿವಾಸ ಕಲ್ಯಾಣೋತ್ಸವ | Kannada Prabha

ಸಾರಾಂಶ

ಪಟ್ಟಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕವಾಗಿ ಅದ್ಧೂರಿ ಹಾಗೂ ವೈಭವವಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಡಿ.೨೫ ರಂದು ಹಮ್ಮಿಕೊಳ್ಳಲಾಗಿದ್ದು, ಇದರಿಂದ ಕೊರಟಗೆರೆ ಧಾರ್ಮಿಕ-ಸಾಂಸ್ಕೃತಿಕ ಚಟುವಟಿಕೆಗಳ ನೂತನ ಅಧ್ಯಾಯಕ್ಕೆ ಸಾಕ್ಷಿಯಾಗಲಿದೆ ಎಂದು ಕನ್ನಿಕಾ ವಿದ್ಯಾಪೀಠ ಶಾಲೆಯ ಅಧ್ಯಕ್ಷ ಎಂ.ಜಿ. ಸುಧೀರ್ ಹೇಳಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಪಟ್ಟಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕವಾಗಿ ಅದ್ಧೂರಿ ಹಾಗೂ ವೈಭವವಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಡಿ.೨೫ ರಂದು ಹಮ್ಮಿಕೊಳ್ಳಲಾಗಿದ್ದು, ಇದರಿಂದ ಕೊರಟಗೆರೆ ಧಾರ್ಮಿಕ-ಸಾಂಸ್ಕೃತಿಕ ಚಟುವಟಿಕೆಗಳ ನೂತನ ಅಧ್ಯಾಯಕ್ಕೆ ಸಾಕ್ಷಿಯಾಗಲಿದೆ ಎಂದು ಕನ್ನಿಕಾ ವಿದ್ಯಾಪೀಠ ಶಾಲೆಯ ಅಧ್ಯಕ್ಷ ಎಂ.ಜಿ. ಸುಧೀರ್ ಹೇಳಿದರು. ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಕನ್ನಿಕಾ ವಿದ್ಯಾಪೀಠ ಶಾಲೆಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಹಾಗೂ ಬೆಂಗಳೂರು ಶ್ರೀವಾರಿ ಫೌಂಡೇಶನ್‌ನ ಆಶ್ರಯದಲ್ಲಿ, ಫೌಂಡೇಶನ್ ಸಹಯೋಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕನ್ನಿಕಾ ವಿದ್ಯಾಪೀಠ ಶಾಲೆಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಹಾಗೂ ಬೆಂಗಳೂರು ಶ್ರೀವಾರಿ ಫೌಂಡೇಶನ್‌ನ ಆಶ್ರಯದಲ್ಲಿ, ಫೌಂಡೇಶನ್ ಅಧ್ಯಕ್ಷ ಎಸ್. ವೆಂಕಟೇಶಮೂರ್ತಿ ಅವರ ಸಾರಥ್ಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದೆ. ತಿರುಪತಿಯಿಂದ ಆಗಮಿಸುವ ವಿಶೇಷ ಆಗಮಿಕ ವೃಂದದ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕಲ್ಯಾಣೋತ್ಸವವನ್ನು ವೈಭವದಿಂದ ನೆರವೇರಿಸಲಾಗುವುದು ಎಂದು ತಿಳಿಸಿದರು. ಡಿ.೨೫ರ ಗುರುವಾರ ಸಂಜೆ ೪ ಗಂಟೆಗೆ ಪಟ್ಟಣದ ಹೊರವಲಯದ ಎಂಜಿ ಪ್ಯಾಲೇಸ್‌ನಲ್ಲಿ ಕಲ್ಯಾಣೋತ್ಸವ ನಡೆಯಲಿದ್ದು, ಶ್ರೀ ವೆಂಕಟೇಶ್ವರ ದೇವರಿಗೆ ಶ್ರೀದೇವಿ ಮತ್ತು ಭೂದೇವಿ ಸಮೇತ ಮಂಗಳಕರವಾಗಿ ಕಲ್ಯಾಣೋತ್ಸವ ನೆರವೇರಿಸಲಾಗುತ್ತದೆ. ರಾತ್ರಿ ೯ ಗಂಟೆಯವರೆಗೆ ತಿರುಪತಿಯ ವೈಕುಂಠದ ಮಾದರಿಯಲ್ಲಿ ವಿಶೇ?ವಾಗಿ ಅಲಂಕೃತ ವೇದಿಕೆಯಲ್ಲಿ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿದ್ದು, ಭಕ್ತರಿಗೆ ಅಪೂರ್ವ ಆಧ್ಯಾತ್ಮಿಕ ಅನುಭವ ದೊರೆಯಲಿದೆ ಎಂದು ಮಾಹಿತಿ ನೀಡಿದರು. ಶಾಲೆಯ ಉಪಾಧ್ಯಕ್ಷ ಕೆ.ಎಸ್. ಶ್ರೀನಿವಾಸ್, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಭಕ್ತರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ಶ್ರೀ ವೆಂಕಟೇಶ ಕಲ್ಯಾಣೋತ್ಸವದ ಲಾಡು ಪ್ರಸಾದವನ್ನು ವಿತರಿಸಲಾಗುತ್ತದೆ. ಡಿ.೨೫ರಂದು ಸಾರ್ವಜನಿಕ ರಜೆ ಇರುವುದರಿಂದ ಹಾಗೂ ಈ ತಿಂಗಳ ಕೊನೆಯಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನೆಲೆ ಶ್ರೀನಿವಾಸ ಕಲ್ಯಾಣೋತ್ಸವವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.ಶಾಲೆಯ ಕಾರ್ಯದರ್ಶಿ ಕೆಎಸ್‌ವಿ ರಘು ಮಾತನಾಡಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಸವಿ ಪೀಠಂನ ಸಚ್ಚಿದಾನಂದ ಸರಸ್ವತಿ, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಡಾ. ಹನುಮಂತನಾಥ ಸ್ವಾಮೀಜಿ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಮಾಜಿ ಶಾಸಕ ಪಿ. ಆರ್ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿಶೇ?ತೆಗಳ ಬಗ್ಗೆ ನಿರ್ದೇಶಕರಾದ ಎಂ.ಜಿ ಬದ್ರಿಪ್ರಸಾದ್ ಚಿನ್ನ ವೆಂಕಟ ಶೆಟ್ಟಿ, ಕೆ.ಆರ್. ನಂಜುಂಡ ಶೆಟ್ಟಿ, ಎಚ್.ಸಿ. ನಾಗೇಂದ್ರ ಬಾಬು ಹಾಗೂ ಕೆ.ಎಸ್. ಪ್ರಶಾಂತ್ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಬಸ್ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭಕ್ತರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆಯೋಜಕರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''