ಕಾಲುವೆ ನೀರಿಗಾಗಿ ಶ್ರೀರಾಮನಗರ ಬಂದ್, ರಸ್ತೆ ತಡೆ

KannadaprabhaNewsNetwork |  
Published : Nov 21, 2026, 02:30 AM IST
20ುಲು1 | Kannada Prabha

ಸಾರಾಂಶ

ತುಂಗಭದ್ರಾ ಎಡದಂಡೆ ಕಾಲುವೆಗೆ ಡಿಸೆಂಬರ್ ಅಂತ್ಯದ ವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಶ್ರೀರಾಮನಗರ ಬಂದ್ ಕರೆ ಹಿನ್ನೆಲೆಯಲ್ಲಿ ಸರ್ವ ರೈತ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಡಾ. ಪುನೀತ್ ರಾಜಕುಮಾರ್ ವೃತ್ತದ ಬಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಗೆ ಡಿಸೆಂಬರ್ ಅಂತ್ಯದ ವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಶ್ರೀರಾಮನಗರ ಬಂದ್ ಕರೆ ಹಿನ್ನೆಲೆಯಲ್ಲಿ ಸರ್ವ ರೈತ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಡಾ. ಪುನೀತ್ ರಾಜಕುಮಾರ್ ವೃತ್ತದ ಬಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಇದರಿಂದಾಗಿ 3 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತುಂಗಭದ್ರಾ ಜಲಾಶಯದ ನೀರನ್ನು ಅವಲಂಬಿತರಾಗಿರುವ ರೈತರು ಈಗಾಗಲೇ ಭತ್ತ ನಾಟಿ ಮಾಡಿ ಬೆಳೆ ಕೈಗೆ ಸಿಗುವ ಹಂತದಲ್ಲಿದೆ. ಆದರೆ ನೀರು ಸಮರ್ಪವಾಗಿ ಹರಿಸದ ಕಾರಣ ರೈತರ ಬಾಯಿಗೆ ಬರುವ ತುತ್ತ ಕಸಿದುಕೊಂಡಂತಾಗುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ಸೇರಿದಂತೆ ಎಡದಂಡೆ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಡಿಸೆಂಬರ್ ಅಂತ್ಯದ ವರೆಗೂ ನೀರು ಬಂದರೆ ಮಾತ್ರ ಭತ್ತ ಬೆಳೆ ಸಿಗುವ ಸಾಧ್ಯತೆ ಹೆಚ್ಚು ಎಂದು ರೈತರು ಹೇಳಿದರು.

ಜಲಾಶಯದಲ್ಲಿ ನೀರಿನ ಲಭ್ಯತೆ ನೋಡಿ ಕುಡಿಯುವ ನೀರು ಮತ್ತು ದನ-ಕರುಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ನೋಡಿ ಕಾಲುವೆಗಳಿಗೆ ನೀರು ಬಿಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಾಲುವೆ ಮೇಲ್ಭಾಗದಲ್ಲಿರುವ ರೈತರು ಅನಧಿಕೃತವಾಗಿ ನೀರು ಬಳಕೆ ಮಾಡುತ್ತಿರುವುದನ್ನು ನಿಯಂತ್ರಿಸಬೇಕು. ಕೂಡಲೆ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು. ಕಾಲುವೆಯಲ್ಲಿ ನೀರನ್ನು ಸ್ಥಗಿತಗೊಳಿಸುವ ಬಗ್ಗೆ ರೈತರೊಂದಿಗೆ ಚರ್ಚಿಸಿ ಸಮಯ ನಿಗದಿಪಡಿಸಬೇಕು. ಅಲ್ಲದೇ ರೈತ ಮುಖಂಡರ ಜತೆ ಸಭೆ ನಡೆಸಿ ನೀರಿನ ನಿರ್ವಹಣೆ ಕುರಿತು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ರೈತರು ಭತ್ತ ಬೆಳೆಯಲು ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೃಷಿ ಯಂತ್ರಗಳ ಸಾಲ ಪಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಜಲ ಸಂಪನ್ಮೂಲ ಇಲಾಖೆಯವರು ಅವೈಜ್ಞಾಮಿಕವಾಗಿ ನೀರಿನ ವೇಳಾಪಟ್ಟಿ ಪ್ರಕಟಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೆ ಅಧಿಕಾರಿಗಳು ಮತ್ತು ಜಿಲ್ಲಾ ಮಂತ್ರಿಗಳು ಇದರ ಬಗ್ಗೆ ಗಮನಹರಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಮಂಜುನಾಥ ಮಸ್ಕಿ, ವೈ. ಆನಂದರಾವ್, ದುರ್ಗಾರಾವ್, ಅನ್ನ ಚಂದ್ರಶೇಖರ್, ಹೆಬ್ಬಾಳ ಶರಣಪ್ಪ, ಕೇಸರಹಟ್ಟಿ ಶರಣಪ್ಪಗೌಡ, ಶರಣೇಗೌಡ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ