ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಜಿಲ್ಲಾ ಹಾಲು ಒಕ್ಕೂಟದಿಂದ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ದಸರಾ ಅಂಗವಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಪೋಸ್ಟರ್ ಅನ್ನು ತಾಲೂಕು ಆಡಳಿತದಿಂದ ಬಿಡುಗಡೆಗೊಳಿಸಿ ಮಾತನಾಡಿದರು.
ತಾಲೂಕು ಸೇರಿದಂತೆ ಜಿಲ್ಲೆಯ ಹಾಲು ಒಕ್ಕೂಟದ ಎಲ್ಲಾ ಕೇಂದ್ರಗಳು, ಗ್ರಾಪಂ ಕಚೇರಿಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹಾಲು ಕರೆಯುವ ಸ್ಪರ್ಧೆ ಮಾಹಿತಿಯನ್ನು ಹಾಲು ಉತ್ಪಾದಕರಿಗೆ ಸಕಾಲಕ್ಕೆ ತಲುಪುವಂತೆ ಪೋಸ್ಟರ್ ಅಂಟಿಸಿ ಹಾಗೂ ಪ್ರಚಾರ ಪಡಿಸಬೇಕು ಎಂದರು.ವಿಜೇತ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ ಮತ್ತು ಟ್ರೋಫಿಯೊಂದಿಗೆ 50 ಸಾವಿರ, ದ್ವೀತಿಯ ಬಹುಮಾನ 30 ಸಾವಿರ ಮತ್ತು ಟ್ರೋಫಿ, ತೃತೀಯ ಬಹುಮಾನ 20 ಸಾವಿರ ರು. ಟ್ರೋಫಿ ಹಾಗೂ ಸಮಾಧಾನಕರ ಬಹುಮಾನ 10 ಸಾವಿರ ನೀಡಲಾಗುತ್ತಿದೆ ಎಂದರು.
ತಹಸೀಲ್ದಾರ್ ಚೇತನಾ ಯಾದವ್ ಮಾತನಾಡಿ, ತಾಲೂಕನ್ನು ಸಹ ಬರಪಟ್ಟಿಯಲ್ಲಿ ಸೇರ್ಪಡೆಯಾಗಿದೆ. ಕ್ಷೇತ್ರ ವ್ಯಾಪ್ತಿ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಎಲ್ಲಾ 21 ಪಂಚಾಯ್ತಿ ವ್ಯಾಪ್ತಿಯ ಪಶು ಇಲಾಖೆ ಅಧಿಕಾರಿಗಳು, ಕೃಷಿ ಸಖಿ, ಪಶು ಸಖಿ ಹಾಗೂ ಪಿಡಿಒಗಳೊಂದಿಗೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಸಹಾಯಕ ಕೃಷಿ ಅಧಿಕಾರಿ ಪ್ರಿಯದರ್ಶಿನಿ, ಪಶುವೈದ್ಯಕೀಯ ಇಲಾಖೆ ವೈದ್ಯರು ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.