ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ದಸರಾ ಉತ್ಸವದ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ರಾಸುಗಳ ಮೆರವಣಿಗೆ ಏರ್ಪಡಿಸಲಾಗುತ್ತಿದೆ. ಪಶುಪಾಲನಾ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಮಹಿಳಾ ದಸರಾ, ರೈತ ದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕು. ದಸರಾ ಉತ್ಸವಕ್ಕೆ ಬರುವ ಆನೆಗಳಿಗೆ ಪಶುಪಾಲನಾ ಇಲಾಖೆ ಅಗತ್ಯ ಮೇವು ಒದಗಿಸಬೇಕು ಎಂದು ತಾಕೀತು ಮಾಡಿದರು.ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವೇದಿಕೆಯಲ್ಲಿ ಸರ್ಕಾರದ ಯೋಜನೆಗಳನ್ನು ಪ್ರಚಾರ ಪಡಿಸಬೇಕು. ಅತಿಥಿಗಳು ಮತ್ತು ಕಲಾವಿದರಿಗೆ ವಸತಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನ ಕಲ್ಪಿಸಬೇಕು ಎಂದರು.
ಈ ವೇಳೆ ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್.ದಿನೇಶ್, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ತಹಸೀಲ್ದಾರ್ ಚೇತನಾ ಯಾದವ್, ಡಿವೈಎಸ್ಪಿ ಶಾಂತಮಲ್ಲಪ್ಪ, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ತಾಪಂ ಇಒ ವೇಣು, ತಾಲೂಕು ಯೋಜನಾಧಿಕಾರಿ ಎಂ.ಎಂ.ತ್ರಿವೇಣಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ, ತೋಟಗಾರಿಕೆ ಇಲಾಖೆ ಪ್ರದೀಪ್‌ಕುಮಾರ್, ಸಿಪಿಐ ಬಿ.ಜಿ.ಕುಮಾರ್ ಸೇರಿದಂತೆ ಅಧಿಕಾರಿಗಳು ಇದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರಿಗೆ ಮಾತ್ರ ಅವಕಾಶವಿದೆ. ಪ್ರವೇಶ ಉಚಿತವಾಗಿದ್ದು, ಪ್ರಬಂಧವು ೨೦೦೦ ಪದಗಳ ಮಿತಿಯೊಳಗಿರಬೇಕು. ವಿಜೇತರಿಗೆ ಪ್ರಥಮ ಬಹುಮಾನ ೩ ಸಾವಿರ ರು., ದ್ವಿತೀಯ ೨ ಸಾವಿರ ರು., ತೃತೀಯ ೧ ಸಾವಿರ ರು. ಹಾಗೂ ಐದು ಮಂದಿಗೆ ಸಮಾಧಾನಕರ ಬಹುಮಾನ ನೀಡುವುದರ ಜೊತೆಗೆ ಪ್ರಶಸ್ತಿ ಫಲಕ, ಫಲ-ತಾಂಬೂಲಗಳೊಂದಿಗೆ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.