ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ತಾಲೂಕು ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.25ರಂದು ಮಧ್ಯಾಹ್ನ 2.3ಕ್ಕೆ ಪಟ್ಟಣ ಸಮೀಪದ ಕಿರಂಗೂರು ಬನ್ನಿ ಮಂಟಪದಲ್ಲಿ ನಂದಿ ಧ್ವಜ ಪೂಜೆ, ಶ್ರೀಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ನಂತರ ಜಂಬೂಸವಾರಿ ಮೆರವಣಿಗೆಗೆ ಹಿರಿಯ ನಟ ಹಾಗೂ ಚಿತ್ರ ನಿರ್ದೇಶಕ ಡಾ.ಟಿ.ಎಸ್.ನಾಗಭರಣ ಚಾಲನೆ ನೀಡಲಿದ್ದಾರೆ ಎಂದರು.
ನಂತರ ಸಂಜೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಬೃಹತ್ ಶ್ರೀರಂಗ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಲಿದ್ದಾರೆ ಎಂದರು.ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿ, ಸಚಿವರಾದ ಎಚ್.ಕೆ. ಪಾಟೀಲ್, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಡಾ.ಎಚ್.ಸಿ ಮಹದೇವಪ್ಪ, ಕೃಷ್ಣಬೈರೇಗೌಡ, ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್, ಶಿವರಾಜ ಸಂಗಪ್ಪ ತಂಗಡಗಿ ಭಾಗವಹಿಸುವರು. ತಾವು ಅಧ್ಯಕ್ಷತೆ ವಹಿಸುವುದಾಗಿ ಶಾಸಕರು ತಿಳಿಸಿದರು.
4 ದಿನಗಳ ಕಾಲ ರೈತ ದಸರಾ, ಸಾಹಿತ್ಯ ಮತ್ತು ಸಾಂಸ್ಕೃತಿಕ ದಸರಾ, ಯೋಗ ದಸರಾ, ದಸರಾ ವಸ್ತು ಪ್ರದರ್ಶನ, ಮಕ್ಕಳ ದಸರಾ, ಮಹಿಳಾ ದಸರಾ, ಯುವ ದಸರಾ, ಕ್ರೀಡಾ ದಸರಾ, ಸಿನಿಮೋತ್ಸವ ಮತ್ತು ಮ್ಯಾರಥಾನ್ ಚಾರಣ ಸೇರಿದಂತೆ ವಿಶೇಷ ಆಕರ್ಷಣೆಯ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ದಸರಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಹಳ್ಳಿಗಳಿಗೆ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಸುತ್ತಮುತ್ತಲಿನ ಜನರು ಆಗಮಿಸಿ ಶ್ರೀರಂಗಪಟ್ಟಣ ದಸರಾ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶಾಸಕರು ಕೋರಿದರು.
ದಸರಾ ಅಂಗವಾಗಿ ಈಗಾಗಲೇ ವೇದಿಕೆ, ಬನ್ನಿಮಂಟಪ ಸ್ವಚ್ಛತೆ, ಮನರಂಜನಾ ಕಾರ್ಯಕ್ರಮಗಳ ಸಿದ್ಧತೆ, ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುವುದು, ಅಗತ್ಯ ಮಾಹಿತಿ, ತಿಂಡಿ ತಿನಿಸು ಸಿಗುವ ಮಳಿಗೆಗಳು ಸೇರಿದಂತೆ ಅಗತ್ಯ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ ಎಂದರು.
ಕೆಆರ್‌ಎಸ್‌ನಲ್ಲಿ ಸೆ.26ರಿಂದ 30ರವರೆಗೆ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, 5 ದಿನಗಳ ಕಾವೇರಿ ಆರತಿಯನ್ನು ವಿಜೃಂಭಣೆಯಿಂದ ಸಾಂಕೇತಿಕವಾಗಿ ಆಚರಿಸಲಾಗುವುದು. ಸೆ.26 ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ಚಾಲನೆ ನೀಡಲಿದ್ದಾರೆ ಎಂದರು.
ಬೆಳಗ್ಗೆ 7 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಫಿಟ್ ಇಂಡಿಯಾ ಮ್ಯಾರಥಾನ್ ಸ್ಪರ್ಧೆ, ಮಧ್ಯಾಹ್ನ ಜಂಬೂಸವಾರಿ ಮೆರವಣಿಗೆ ಹಾಗೂ ದಸರಾ ಉದ್ಘಾಟನೆ, ನಂತರ ಸಂಜೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ. ಸಂಜೆ 7ಕ್ಕೆ ಕಥಕ್ ಶೈಲಿಯಲ್ಲಿ ಚಾಮುಂಡೇಶ್ವರಿ ನೃತ್ಯ. ರಾತ್ರಿ 8.30 ರಿಂದ 11 ಗಂಟೆರವರೆಗೆ ಹಿನ್ನೆಲೆ ಗಾಯಕರಾದ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ರಸ ಸಂಜೆ ನಡೆಯಲಿದೆ.
ಶ್ರೀರಂಗಪಟ್ಟಣ:
ತಾಲೂಕಿನ ಕೆಆರ್‌ಸಾಗರದ ಬೃಂದಾವನದಲ್ಲಿ ಶ್ರೀರಂಗಪಟ್ಟಣ ದಸರಾ ಅಂಗವಾಗಿ 15 ದಿನಗಳ ವಿಶೇಷ ದೀಪಾಲಂಕಾರಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಚಾಲನೆ ನೀಡಿದರು.ಈ ವೇಳೆ ಕಾವೇರಿ ಆರತಿ ಸಮಿತಿ ಸದಸ್ಯ ರಾಮಪ್ರಸಾದ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ರಘುರಾಮ್, ಕಾರ್ಯಪಾಲಕ ಅಭಿಯಂತರ ಜಯಂತ್, ಎಇಇ ಫಾರೂಕ್ ಅಭು, ಡಿವೈಎಸ್‌ಪಿ ಶಾಂತಮಲ್ಲಪ್ಪ ಸೇರಿದಂತೆ ಇತರರು ಇದ್ದರು.