ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕರ್ನಾಟಕ ರಕ್ಷಣಾ ವೇದಿಕೆ ಎಚ್.ಶಿವರಾಮೇಗೌಡ ಬಣ ತಾಲೂಕು ಶಾಖೆ, ಮಹಾವೀರ್ ಕಣ್ಣಿನ ಆಸ್ಪತ್ರೆಯಿಂದ ಪಟ್ಟಣದ ಶ್ರೀರಂಗನಾಥಸ್ವಾಮಿ ಮೈದಾನದಲ್ಲಿ ಕರವೇ ತಾಲೂಕು ಅಧ್ಯಕ್ಷ ಚಂದಗಾಲು ಶಂಕರ್ ಪಂದ್ಯಾವಳಿ ಆಯೋಜಿಸಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ತಂಡದ ಗೆಲುವುಗಾಗಿ ಸೆಣ ಸಾಟ ನಡೆಸಿದರು.
ಅಂತಿಮವಾಗಿ ಪಟ್ಟಣದ ನ್ಯೂ ಆಕ್ಸ್‌ಫರ್ಡ್ ಶಾಲಾ ವಿದ್ಯಾರ್ಥಿನಿಯರು ಪ್ರಥಮ, ನಗುವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ದ್ವಿತೀಯ, ಪಟ್ಟಣದ ವಿದ್ಯಾಭಾರತಿ ಶಾಲೆ ತೃತಿಯ ಹಾಗೂ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ವಿದ್ಯಾರ್ಥಿನಿಯರು ನಾಲ್ಕನೇ ಸ್ಥಾನ ಪಡೆದರು. ವಿಜೇತ ತಂಡಕ್ಕೆ ನಗದು ಸಹಿತ ಟ್ರೋಪಿ ವಿತರಣೆ ಮಾಡಿದರು.ಕಣ್ಣಿನ ತಪಾಸಣಾ ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಭಾಗವಹಿಸಿ, ತಮ್ಮ ನೇತ್ರ ತಪಾಸಣೆ ಮಾಡಿಸಿಕೊಂಡರು. ನುರಿತ ತಜ್ಞರು ಸ್ಥಳದಲ್ಲೇ ಅಗತ್ಯ ಸಲಹೆ ನೀಡಿದರು. ಶಸ್ತ್ರಚಿಕಿತ್ಸೆ ಅಗತ್ಯವಿರುವವರಿಗೆ ಆಸ್ಪತ್ರೆಗೆ ಭೇಟಿ ನೀಡುವಂತೆ ತಿಳಿಸಿದರು.
ಡಾ.ಕೆ.ವೈ.ಶ್ರೀನಿವಾಸ್ ಕ್ಯಾತನಹಳ್ಳಿಗೆ ಶ್ರದ್ಧಾಂಜಲಿ
ಹೃದಯಾಘಾತದಿಂದ ನಿಧನರಾದ ಡಾ.ಕೆ.ವೈ.ಶ್ರೀನಿವಾಸ್ ಕ್ಯಾತನಹಳ್ಳಿ ಅವರು ಹಲವು ವರ್ಷಗಳಿಂದ ಹತ್ತಾರು ಸಮಾಜಮುಖಿ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದರು. ಅವರ ಸೇವೆಗಳು ಶ್ಲಾಘನೀಯ ಎಂದು ಪ್ರಜ್ಞಾವಂತರ ವೇದಿಕೆ ಸಂಚಾಲಕ, ವಕೀಲ ಸಿ.ಎಸ್.ವೆಂಕಟೇಶ್ ಹೇಳಿದರು.
ನಂತರ ವೆಂಕಟೇಶ್ ಮಾತನಾಡಿ, ವೃತ್ತಿಯಲ್ಲಿ ವೈದ್ಯರಾದರೂ ಶಾಲಾ-ಕಾಲೇಜು ಮಕ್ಕಳಿಗೆ ಪ್ರೋತ್ಸಾಹ, ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ, ಗಿಡನೆಡುವುದು ಸೇರಿದಂತೆ ವೈದ್ಯ ವೃತ್ತಿ ಜೊತೆಗೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದರು ಎಂದರು.