ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಮಾತನಾಡಿ, ಕ್ಷಯರೋಗದ ಲಕ್ಷಣಗಳು, ಹರಡುವ ವಿಧಾನ, ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಹಾಗೂ 100 ದಿನಗಳ ಅಭಿಯಾನದ ಉದ್ದೇಶ ಕುರಿತು ಮಾಹಿತಿ ನೀಡಿದರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಿಗೆ ಸಿಬ್ಬಂದಿಗೆ ಕ್ಷಯ ರೋಗದ ಬಗ್ಗೆ ಜಾಗೃತಿ ಹಾಗೂ ತಪಾಸಣೆ ನಡೆಸಲಾಗುತ್ತಿದೆ. ಅದಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರ ನೀಡಬೇಕು ಎಂದರು.ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ.ಹೇಮಣ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ತಾಪಂ ಯೋಜನಾಧಿಕಾರಿ ತ್ರಿವೇಣಿ, ಲೆಕ್ಕ ಸಹಾಯಕ ಅಧಿಕಾರಿ ಪವಿತ್ರ, ವ್ಯವಸ್ಥಾಪಕಿ ದಿವ್ಯ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳ, ಆರೋಗ್ಯ ನಿರೀಕ್ಷಣಾಧಿಕಾರಿ ಪಣಿಂದ್ರ ಹಾಗೂ ತಾಪಂ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಪುರಸಭೆ ಅಧಿಕಾರಿಗಳು, ಸಿಬ್ಬಂದಿ, ಕಾರ್ಮಿಕರಿಗೆ ಕ್ಷಯರೋಗ ತಪಾಸಣೆ
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮೇಗೌಡ, ಕ್ಷಯರೋಗ ಹರಡುವ ಬಗ್ಗೆ ಲಕ್ಷಣಗಳು ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ತಿಳಿಸಿದರು. 100 ದಿನಗಳ ಆಂದೋಲನ, ರೋಗಲಕ್ಷಣಗಳ ಬಗ್ಗೆ ತಿಳಿಸಿ ತಪಾಸಣೆ ನಡೆಸಲಾಯಿತು.
ಕ್ಷಯ ಮುಕ್ತ ಮಂಡ್ಯ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.