ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಮಹದೇವಪುರದ ಬಳಿ ಹರಿಯುವ ವಿರಿಜಾ ಉಪನಾಲೆಯಡಿಯಲ್ಲಿ ಬರ್ಗಿ ಉಪನಾಲೆ ಆಧುನೀಕರಣ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಮಹದೇವಪುರ ಗ್ರಾಮದ ಬಳಿ ಇರುವ ವಿರಿಜಾ ಉಪನಾಲೆಯ ಕೊನೆ ಭಾಗದ ರೈತರಿಗೆ ನೀರು ತಲುಪಲು ಸಮಸ್ಯೆಯಾಗಿತ್ತು. ಸರ್ಕಾರ ನಾಲೆಗಳ ಅಭಿವೃದ್ಧಿಗೆ ನೂರಾರು ಕೋಟಿ ರು. ಬಿಡುಗಡೆ ಮಾಡಿದೆ. ಈ ಭಾಗದ ರೈತರ ಹಿತ ಕಾಯಲು 10 ಕೋಟಿ ರು. ವೆಚ್ಚದಲ್ಲಿ ನಾಲಾ ಆಧುನೀಕರಣ ಕಾಮಗಾರಿ ನಡೆಸಲಾಗುತ್ತಿದೆ ಎಂದರು.ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಿಸಲು ಆರೋಗ್ಯ ಸಚಿವ ದಿನೇಸ್ ಗುಂಡುರಾವ್ ಅವರಿಗೆ ಮನವಿ ಮಾಡಲಾಗಿತ್ತು. ಇದೀಗ 2.5 ಕೋಟಿ ರು ಹಣವನ್ನು ಬಿಡುಗಡೆ ಮಾಡಿದ್ದು, ನೂತನ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದರು.
ಈ ವೇಳೆ ಮಂಡ್ಯ ಡಿಎಚ್‌ಒ ಡಾ.ಮೋಹನ್, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಶ್ವಂತ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ತಾಪಂ ಮಾಜಿ ಸದಸ್ಯ ಕಾಳೇಗೌಡ ಸೇರಿದಂತೆ ಗ್ರಾಮದ ಇತರ ಮುಖಂಡರು ಹಾಗೂ ವಿವಿದ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.