ಶ್ರೀರಂಗಪಟ್ಟಣ: ನೀರು ಬಿಡುವಂತೆ ಆದೇಶ ಖಂಡಿಸಿ ಪಂಜಿನ ಮೆರವಣಿಗೆ

KannadaprabhaNewsNetwork |  
Published : Jul 29, 2026, 01:45 AM IST
28ಕೆಎಂಎನ್ ಡಿ22 | Kannada Prabha

ಸಾರಾಂಶ

ಮಳೆಯು ಇಲ್ಲದೆ ಜಲಾಶಯದಲ್ಲಿ ನೀರಿಲ್ಲದೆ ರಾಜ್ಯದ ಜನರು ಸಂಕಷ್ಟದಲ್ಲಿರುವಾಗಲೇ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸಿ ಎಂದು ಹೇಳಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಈ ಆದೇಶವನ್ನು ತಿರಸ್ಕರಿಸಿ ನಾಡಿನ ಜನರು, ರೈತರ ಭವಿಷ್ಯವನ್ನು ಉಳಿಸಿಕೊಳ್ಳಲು ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಮಿಳುನಾಡಿಗೆ ನಿತ್ಯ 3,500 ಕ್ಯುಸೆಕ್ ನೀರು ಬಿಡುಗಡೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಖಂಡಿಸಿ ಭೂಮಿತಾಯಿ ಹೋರಾಟ ಸಮಿತಿ ಹಾಗೂ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.

ರೈತಪರ ಹಿರಿಯ ಹೋರಾಟಗಾರ ಕೆ.ಎಸ್ ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣ ವೃತ್ತದ ಬಳಿ ಸೇರಿದ ಸಮಿತಿ ಸದಸ್ಯರು, ಪಂಜುಗಳನ್ನು ಹಿಡಿದು ಸಮಿತಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮಳೆಯು ಇಲ್ಲದೆ ಜಲಾಶಯದಲ್ಲಿ ನೀರಿಲ್ಲದೆ ರಾಜ್ಯದ ಜನರು ಸಂಕಷ್ಟದಲ್ಲಿರುವಾಗಲೇ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸಿ ಎಂದು ಹೇಳಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಈ ಆದೇಶವನ್ನು ತಿರಸ್ಕರಿಸಿ ನಾಡಿನ ಜನರು, ರೈತರ ಭವಿಷ್ಯವನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಸರ್ಕಾರವನ್ನು ಆಗ್ರಹಿಸಿದರು.

ರಾಜ್ಯದಲ್ಲೇ ಕುಡಿಯಲು, ಬೆಳೆಗಳಿಗೆ ನೀರಿಲ್ಲ. ಈ ವೇಳೆ ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಿ ಎಂದು ಸಮಿತಿ ಆದೇಶ ಮಾಡಿರುವುದು ಖಂಡನೀಯ. ಇದರಿಂದ ರೈತರು ಹಾಗೂ ಮಂಡ್ಯ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಒಂದು ವೇಳೆ ಸಮಿತಿ ಆದೇಶಕ್ಕೆ ಮಣಿದು ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ, ಸಮಿತಿ ಖಜಾಂಚಿ ಉಂಡವಾಡಿ ಮಹಾದೇವ, ಪ್ರಧಾನ ಕಾರ್ಯದರ್ಶಿ ಎಂ.ವಿ.ಕೃಷ್ಣ ಕೆಂಪೇಗೌಡ, ರಾಮಕೃಷ್ಣ, ಶ್ರೀನಿವಾಸ್, ನಿಂಗೇಗೌಡ, ರಾಮಚಂದ್ರ, ಬಾಬು, ದರ್ಶನ್, ಸೇರಿದಂತೆ ಇತರ ಸಮಿತಿ ಮುಖಂಡರು, ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 20,668 ಚದರ ಕಿ.ಮೀ.ಪರಿಸರ ಸೂಕ್ಷ್ಮ ಪ್ರದೇಶ: ಕೇಂದ್ರ
ಕಾರ್ಮಿಕರ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯ